ಕುಶಾಲನಗರ, ಸೆ. ೧೧: ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿಧೋದ್ದೇಶ ಸಹಕಾರ ಸಂಘ ೨೦೨೫-೨೬ರ ಸಾಲಿನಲ್ಲಿ ರೂ. ೨.೮೯ ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರವಣ ಕುಮಾರ್ ತಿಳಿಸಿದರು.

ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ವಿಸ್ತರಿಸುವ ಚಿಂತನೆ ಹೊಂದಲಾಗಿದೆ. ಈ ಸಾಲಿನಲ್ಲಿ ರೂ. ೪೩೯ ಕೋಟಿ ವಾರ್ಷಿಕ ವ್ಯವಹಾರ ನಡೆಸಿದ್ದು, ಸಂಘವು ಕಳೆದ ೨೨ ವರ್ಷಗಳಿಂದಲೂ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಈ ಬಾರಿಯು ಸಹ ಸಂಘವು ತನ್ನ ಲಾಭವನ್ನು ಕೋಟಿ ರೂಪಾಯಿಗೆ ಹೆಚ್ಚಿಸಿಕೊಂಡಿದೆ. ಸದಸ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿರುತ್ತೇವೆ ಎಂದು ಹೇಳಿದರು.

ಸದಸ್ಯರಿಗೆ ಕಳೆದ ೨೧ ವರ್ಷಗಳಿಂದ ಶೇ.೭ರಿಂದ ಶೇ.೨೫ ರಷ್ಟು ಡಿವಿಡೆಂಡ್ ನೀಡುತ್ತಿದ್ದು, ಈ ಬಾರಿಯೂ ಕೂಡ ಶೇ.೨೫ರಷ್ಟು ಡಿವಿಡೆಂಡ್‌ನ್ನು ನಮ್ಮ ಸದಸ್ಯರಿಗೆ ನೀಡಲಾಗುತ್ತದೆ. ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ..೧೨ ರ ಪೂರ್ವಾಹ್ನ ೧೧ ಗಂಟೆಗೆ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಸಂಘದ ‘ಎ’ ತರಗತಿ ಸದಸ್ಯರುಗಳು ತಮ್ಮ ಸ್ವಂತ ಕಟ್ಟಡದಲ್ಲಿ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದು ಉತ್ತಮ ವ್ಯವಹಾರವನ್ನು ನಡೆಸುತ್ತಿರುವವರಿಗೆ ಸದಸ್ಯರ ಅನುಕೂಲಕ್ಕಾಗಿ, ಸಂಘದಲ್ಲಿ ೨೪ ವಿವಿಧ ಸಾಲಗಳನ್ನು ವಿತರಿಸಲಾಗುತ್ತಿದೆ. ಸಂಘದ ವಸೂಲಾತಿ ಪ್ರಗತಿಯು ಶೇಕಡ ೯೫.೭೯ರಷ್ಟು ದಾಟಿರುವ ಕಾರಣ ಸಂಘವು ಈ ಬಾರಿ ಲೆಕ್ಕ ಪರಿಶೋಧನಾ ವರದಿಯಲ್ಲಿ ‘ಎ’ ಶ್ರೇಣಿಯನ್ನು ಹೊಂದಿದೆ ಎಂದು ತಿಳಿಸಿದರು.

ಸಂಘವು ವನ ಸಿರಿಯಂತಹ ಸಾಮಾಜಿಕ ಕಾರ್ಯಕ್ರಮವನ್ನು ನಡೆಸುತ್ತಿದೆ. ಈಗಾಗಲೇ ಕುಶಾಲನಗರ ವ್ಯಾಪ್ತಿಯಲ್ಲಿ ೭೦೦ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಲಾಗಿದೆ. ಮುಂದಿನ ದಿನಗಳಲ್ಲಿ ೪೫೦ ಗಿಡಗಳನ್ನು ನೆಡಲು ಸ್ಥಳ ಪರಿಶೀಲನೆ ಮಾಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ಕೈಜೋಡಿಸುವ ನಿಟ್ಟಿನಲ್ಲಿ ಸಂಘದ ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ಸಂಘ ತೊಡಗಿಸಿಕೊಂಡಿದೆ. ಈ ಸಾರಿನಲ್ಲಿ ರಕ್ತದಾನ ಶಿಬಿರ ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯೋಜನೆಗೆ ಸಹಕಾರ ಮತ್ತು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಲಾಗಿದೆ.

ಮುಂದಿನ ೩ ವರ್ಷಗಳಿಗೆ ಸಂಘವು ಪ್ರಾರಂಭವಾಗಿ ೨೫ ವರ್ಷ ಪೂರೈಸುತ್ತಿದ್ದು ಬೆಳ್ಳಿ ಮಹೋತ್ಸವವನ್ನು ಆಚರಿಸಲು ಈಗಿನಿಂದಲೇ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಬೆಳ್ಳಿ ಮಹೋತ್ಸವದ ಸವಿ ನೆನಪಿಗಾಗಿ ಸೂಕ್ತ ಸ್ಮಾರಕ ಭವನವನ್ನು ನಿರ್ಮಾಣ ಮಾಡಿ, ಬೆಳ್ಳಿ ಮಹೋತ್ಸವವನ್ನು ವಿಜೃಂಭಣೆಯಿAದ ಆಚರಿಸಲಿದ್ದೇವೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ನಿರ್ದೇಶಕರು, ಅಧಿಕಾರಿಗಳು ಇದ್ದರು.