ಶನಿವಾರಸಂತೆ, ಸೆ. ೧೨: ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಪ್ರೌಢಶಾಲೆಯ ನೇಸರ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣಪತಿ ತಯಾರಿಕೆ ಕಾರ್ಯಕ್ರಮ ನಡೆಯಿತು.
ನೇಸರ ಇಕೋ ಕ್ಲಬ್ ಸಂಚಾಲಕಿ ಹಾಗೂ ಶಿಕ್ಷಕಿ ಹೆಚ್.ಎನ್.ಮಂಗಳಾ ನೇತೃತ್ವದಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗಣಪತಿ ಮೂರ್ತಿಗಳನ್ನು ತಯಾರಿಸಿ ಸಂಭ್ರಮಿಸಿದರು.
ಶಿಕ್ಷಕಿ ಮಂಗಳಾ ಮಾತನಾಡಿ, ಪರಿಸರ ಸ್ನೇಹಿ ಗಣಪತಿ ತಯಾರಿಕೆಯಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂದರು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಮಹತ್ತರ ಪಾತ್ರ ವಹಿಸಬೇಕು ಎಂದು ಜಾಗೃತಿ ಮೂಡಿಸಿದರು. ಮುಖ್ಯ ಶಿಕ್ಷಕ ಪಿ. ನರಸಿಂಹಮೂರ್ತಿ ಮಾತನಾಡಿ, ಗೌರಿ-ಗಣೇಶ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕು ಎಂದರು. ಶಿಕ್ಷಕರಾದ ಸಿ.ಆರ್. ಗೋಪಾಲ್, ಭವಾನಿ, ಶಬಾನಾ ಹಾಗೂ ಹಸೀನಾ ಬಾನು ಹಾಜರಿದ್ದರು. ವಿದ್ಯಾರ್ಥಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು.