ಚೆಯ್ಯಂಡಾಣೆ, ಸೆ. ೧೨: ವೀರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕೆ.ಕೆ ಗ್ರೂಪ್ ಕಟ್ಟಡದ ಸಭಾಂಗಣದಲ್ಲಿ ಪಕ್ಷ ಸೇರ್ಪಡೆ ಹಾಗೂ ನೂತನ ಮಹಿಳಾ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ ನಡೆಯಿತು.

ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಂಡ ನಯನಾ ಜಗತ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮಹಿಳಾ ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷಕ್ಕೆ ಸೇರ್ಪಡೆಗೊಂಡ ಮಹಿಳಾ ಕಾರ್ಯಕರ್ತರನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ. ಎಸ್ ಪೊನ್ನಣ್ಣ ಅವರು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ಶಾಸಕ ಪೊನ್ನಣ್ಣ, ಮಹಿಳಾ ಕಾರ್ಯಕರ್ತರ ಸೇರ್ಪಡೆಯಿಂದ ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಂಡಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗಟ್ಟಿನಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರ ಕಾರ್ಯಗಳ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.

ಮಹಿಳೆಯರನ್ನು ಸಂಘಟಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕೆ ಸಂಬAಧಪಟ್ಟAತೆ ನಿರಂತರವಾಗಿ ಕಾರ್ಯನಿರ್ವಹಿಸುವ ಮೂಲಕ ಮಹಿಳಾ ಕಾಂಗ್ರೆಸ್ ಘಟಕವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವೀರಾಜಪೇಟೆ ಬ್ಲಾಕ್ ಹಾಗೂ ವಿವಿಧ ವಲಯಗಳಿಗೆ ಸಂಬAಧಿಸಿದ ನೂತನ ಮಹಿಳಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು. ನೂತನ ಪದಾಧಿಕಾರಿಗಳು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದೊಂದಿಗೆ ಬೆಸೆಯುವಂತೆ ಮುಖಂಡರು ಕರೆ ನೀಡಿದರು.

ಇದೇ ಸಂದರ್ಭ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಹಾಗೂ ವೀರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಂಡ ನಯನಾ ಜಗತ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷ ನೆರವಂಡ ಉಮೇಶ್, ಮಹೇಶ್, ವೀರಾಜಪೇಟೆ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಡಿಸಿಸಿ ಸದಸ್ಯ ಮುಕ್ಕಾಟಿರ ಸಂದೀಪ್, ವೀರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಮಾಜಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಉಪಾಧ್ಯಕ್ಷೆ ಫಸಿಯಾ ತಬಸುಂ ಸೇರಿದಂತೆ ಮಹಿಳಾ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.