ಮಡಿಕೇರಿ, ಸೆ. ೧೨: ೨೦೨೬ ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕವಿ/ ಕವಯತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ ೨೧ರ ಸಂಜೆ ೫ ಗಂಟೆ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ.
ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯAತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(೪ ಸಾಲಿನ ಗರಿಷ್ಠ ೪ ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(೬ ರಿಂದ ೧೪ ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.ಮಕ್ಕಳ ಕವನ ಕಳುಹಿಸುವವರು ತರಗತಿ ಹಾಗೂ ಶಾಲೆಯ ವಿವರವನ್ನು ನಮೂದಿಸಬೇಕು.
ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸಾಪ್-೯೧೧೩೦೬೯೮೨೭ ಅಥವಾ ೯೭೩೧೪೬೯೮೭೧ ಮೂಲಕ ಕಳುಹಿಸಬಹುದು. ಕವನಗಳನ್ನು ಅಕ್ಷರಗಳು ತಪ್ಪಿಲ್ಲದಂತೆ ಟೈಪ್ ಮಾಡಿ ಕಳುಹಿಸಬೇಕು., ವಾಟ್ಸಾಪ್ ನಲ್ಲಿ ಕವನದ ಛಾಯ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ.
ವಾಟ್ಸಾö್ಯಪ್ ಇಲ್ಲದಿರುವವರು ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು.ವಿಳಾಸ-ಅಧ್ಯಕ್ಷರು, ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ-೫೭೧೨೦೧. ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು. ಅಂಚೆ ಮೂಲಕ ಕಳುಹಿಸುವವರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.
ಕವನಗಳ ನಿಬಂಧನೆಗಳು- ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ ೨೦ ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೆ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್- ೯೯೪೫೪೧೧೮೨೧ ಇವರನ್ನು ಸಂಪರ್ಕಿಸಬಹುದು.
ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಕಲ್ಪಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.ವಿವಾದಾತ್ಮಕ ಕವನಗಳನ್ನು ಪರಿಗಣಿಸುವುದಿಲ್ಲ.ಕವಿಗೋಷ್ಠಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ನಂತರ ತಿಳಿಸಲಾಗುತ್ತದೆ ಎಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.