ಕೂಡಿಗೆ, ಸೆ. ೧೨: ಕರ್ನಾಟಕ ರಾಜ್ಯದಲ್ಲಿ ಪ್ರಥಮವಾಗಿ ಆರಂಭಗೊAಡ ಕೂಡಿಗೆ ಹಾಲಿನ ಡೈರಿಯನ್ನು ಅಭಿವೃದ್ಧಿಪಡಿಸುವ ಮೂಲಕ ಅದರ ಸಾಮರ್ಥ್ಯ ವಿಸ್ತ್ತರಣೆಯನ್ನು ಹೆಚ್ಚಿಸುವ ಮುಖೇನ ಅಭಿವೃದ್ಧಿಪಡಿಸಲು ಆಡಳಿತ ಮಂಡಳಿಯ ತೀರ್ಮಾನದಂತೆ ಅಂದಾಜು ೧೪. ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷರು, ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಹಾಸನದಲ್ಲಿ ನಡೆದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ತಿಳಿಸಿದರು.

ಹಾಸನ ಹಾಲು ಒಕ್ಕೂಟದ ವತಿಯಿಂದ ನಡೆದ ಮೂರು ಜಿಲ್ಲೆಗಳ ಒಕ್ಕೂಟದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೂಡಿಗೆ ಡೈರಿ ಅಭಿವೃದ್ಧಿಗೆ ಪೂರಕವಾದ ಕ್ರಿಯಾಯೋಜನೆ ಮೂಲಕ ಕರ್ನಾಟಕ ರಾಜ್ಯ ಹಾಲು ಮಹಾಮಂಡಳದ ಮೂಲಕ ಅಂದಾಜು ೧೪. ಕೋಟಿ ವೆಚ್ಚದ ಕ್ರಿಯಾಯೋಜನೆಯ ಅನುಗುಣವಾಗಿ ಟೆಂಡರ್ ಪ್ರಕ್ರಿಯೆ ನಡೆದು ಅದರ ನಿಯಮಗಳ ಅನುಸಾರವಾಗಿ ನೂತನ ಕಟ್ಟಡ ಸೇರಿದಂತೆ ವಿವಿಧ ವಿಭಾಗದ ಕಟ್ಟಡಗಳ ಕಾಮಗಾರಿ ಮುಂದಿನ ಹಂತದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ಮತ್ತು ಹಾಲು ಉತ್ಪಾದಕ ಸಂಘಗಳ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರವನ್ನು ಒಕ್ಕೂಟದ ವತಿಯಿಂದ ನೀಡಲಾಗುವುದು ಎಂದರು.

ಈ ಸಂದರ್ಭ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಮಹೇಶ್, ತಾಂತ್ರಿಕ ವಿಭಾಗದ ವ್ಯವಸ್ಥಾಪಕಿ ಮಾನಸ ಪಾಟೀಲ್, ಹಣಕಾಸು ವಿಭಾಗದ ವ್ಯವಸ್ಥಾಪಕಿ ಸೌಜನ್ಯ ಸೇರಿದಂತೆ ಮೂರು ಜಿಲ್ಲೆಯ ಒಕ್ಕೂಟದ ನಿರ್ದೇಶಕರು ಹಾಜರಿದ್ದರು. -ಕೆ.ಕೆ. ನಾಗರಾಜಶೆಟ್ಟಿ