ಮುಳ್ಳೂರು, ಸೆ. ೧೨: ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಆಶ್ವಾಸನೆ ನೀಡಿದರು.
ಅವರು ಕೊಡ್ಲಿಪೇಟೆ ಕಿರಿಕೊಡ್ಲಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೊಡ್ಲಿಪೇಟೆ ಹೋಬಳಿಮಟ್ಟದ ಪ್ರಜಾಸೇವೆ ಆಂದೋಲನ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಸಾರ್ವಜನಿಕರ ಕುಂದುಕೊರತೆ ಮತ್ತು ಜನರ ಅಹವಾಲನ್ನು ಸ್ವೀಕರಿಸಿ ಸ್ಥಳದಲ್ಲಿ ಸಮಸ್ಯೆ ಬಗ್ಗೆ ಪರಿಹಾರ ನೀಡುವ ಉದ್ದೇಶದಿಂದ ಜನಪ್ರತಿನಿದಿಗಳುü ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಅರ್ಜಿದಾರರಿಗೆ ಇಂದು ಬಾ ನಾಳೆ ಬಾ ಎಂದು ಸತಾಯಿಸುತ್ತಾರೆ ಅರ್ಜಿದಾರನ ಕೆಲಸ ಆಗುವುದಾದರೆ ಆಗುತ್ತೆ ಅಥವಾ ಇಲ್ಲ ಎಂದು ಹೇಳಬೇಕು ಜನರನ್ನು ಸತಾಯಿಸುವುದು ಬೇಡ ಎಂದು ಬೇಸರ ವ್ಯಕ್ತಪಡಿಸಿದರು. ಕೊಡ್ಲಿಪೇಟೆ ಹೋಬಳಿಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವುದರಿಂದ ಕುಡಿಯವ ನೀರಿಗೆ ಆದ್ಯತೆ ನೀಡಲಾಗುತ್ತಿದೆ, ಕೊಡ್ಲಿಪೇಟೆ-ಮಲ್ಲಿಪಟ್ಟಣ ೧ ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಗ್ರಾಮೀಣ ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದ ಶಾಸಕ ಸದ್ಯಕ್ಕೆ ಕಾನೂನು ತಿದ್ದುಪಡಿಯ ಹಿನ್ನೆಲೆ ಅಕ್ರಮ ಸಕ್ರಮ ರದ್ದುಗೊಂಡಿರುವುದಾಗಿ ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಸಕರು ಜನರ ಅಹವಾಲು ಸ್ವೀಕರಿಸಿದರು. ಈ ಸಂದರ್ಭ ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಉಪವಿಭಾಗದಿಕಾರಿ ನಿತಿನ್ ಚಕ್ಕಿ, ೪ಏಳನೇ ಪುಟಕ್ಕೆ
ಸೋಮವಾರಪೇಟೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಡಿವೈಎಸ್ಪಿ ಚಂದ್ರಶೇಖರ್, ಸಿಐ ಕೃಷ್ಣರಾಜ್, ಹೈಕೋರ್ಟಿನ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಿ.ಎಂ. ಕಾಂತರಾಜ್ ಮತ್ತು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.ಆಂದೋಲನ ಕಾರ್ಯಕ್ರಮದಲ್ಲಿ ಈ ಭಾಗದ ಜನರ ೧೫೩ ಕ್ಕಿಂತ ಹೆಚ್ಚಿನ ವಿವಿಧ ಅಹವಾಲುಗಳನ್ನು ಸ್ವೀಕರಿಸಲಾಯಿತು.
-ಭಾಸ್ಕರ್ ಮುಳ್ಳೂರು