ಮಡಿಕೇರಿ, ಸೆ. ೧೩: ಬಂಗಾರಪೇಟೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಇಂದಿರಾಗಾAಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾಧ್ಯಕ್ಷೆ ರಿಶಾನ ತೈಸೀರ್, ಕಾರ್ಯದರ್ಶಿ ತಾಹಿರಾ ಅಲಿ, ಜಂಟಿ ಕಾರ್ಯದರ್ಶಿ ಮೇರಿ ವೇಗಸ್, ಉಪಾಧ್ಯಕ್ಷೆ ಝಾಕಿಯಾ ಸೇರಿದಂತೆ ಪದಾಧಿಕಾರಿಗಳು ಇದ್ದರು.