ಸೋಮವಾರಪೇಟೆ, ಸೆ. ೧೩: ತಾ. ೧೫ರಂದು ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಹಶೀಲ್ದಾರ್ ಮಾತನಾಡಿ, ತಾ. ೧೫ರಂದು ಸ್ಥಳೀಯ ಕೊಡವ ಸಮಾಜದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಅರ್ಥಪೂರ್ಣವಾಗಿ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮ ಆಚರಿಸುವಂತೆ ತಿಳಿಸಿದರು. ಪಟ್ಟಣದ ಸುತ್ತಮುತ್ತಲಿನ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು. ನುರಿತ ಭಾಷಣಕಾರರಿಂದ ಸಂವಿಧಾನದ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಬೇಕು. ಅಂದು ನಡೆಯುವ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಅವರನ್ನು ಆಹ್ವಾನಿಸಬೇಕೆಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಅವರು ಕಾರ್ಯಕ್ರಮ ನಡೆಸುವ ಬಗ್ಗೆ ಸರ್ಕಾರದ ಸುತ್ತೋಲೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ದಲಿತ ಸಂಘಟನೆಗಳ ಮುಖಂಡ ಜಯಪ್ಪ ಹಾನಗಲ್ಲು ಇದ್ದರು.