ಶನಿವಾರಸಂತೆ: ಸಮೀಪದ ನಿಡ್ತ ಸರ್ಕಾರಿ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣೇಶ ತಯಾರಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಆಕೃತಿಯ ಮಣ್ಣಿನ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಪಾಲ್ಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಎಂ.ಸಿ. ನಳಿನಿ ಮಾತನಾಡಿ, ಪರಿಸರ ಸ್ನೇಹಿ ಗಣೇಶ ತಯಾರಿಕೆಯ ಮಹತ್ವ, ಉದ್ದೇಶ, ಅದರಿಂದಾಗುವ ಪ್ರಯೋಜನಗಳು ಹಾಗೂ ರಾಸಾಯನಿಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ನಿಸರ್ಗ ಇಕೋ ಕ್ಲಬ್ ಸಂಚಾಲಕ ಹಾಗೂ ಶಿಕ್ಷಕ ಡಿ.ಎಸ್.ಮಧುಕುಮಾರ್, ಶಿಕ್ಷಕರಾದ ಮಾರುತಿ ಅರೇರ್, ಎಂ.ವಿ. ರೂಪಾ, ಪ್ರಿಯಾಂಕ ಚಿಪಳೂಣಕರ್, ಸಂಗೀತಾ, ನೇತ್ರಾವತಿ ಹಾಜರಿದ್ದರು.ಕುಶಾಲನಗರ: ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟಿçÃಯ ಹಸಿರು ಪಡೆಯ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಶಾಲಾ ಮಕ್ಕಳು ಪರಿಸರ ರಕ್ಷಣೆಯ ಸಂದೇಶದೊAದಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮ ನಡೆಯಿತು.
ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯು ನಮ್ಮ ಪ್ರಕೃತಿಯನ್ನು ರಕ್ಷಿಸಲು ಮತ್ತು ಹಬ್ಬದ ಸಂತೋಷವನ್ನು ಹೆಚ್ಚಿಸಲು ಅತ್ಯಂತ ಅಗತ್ಯವಾಗಿದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಸ್. ಸಣ್ಣಸ್ವಾಮಿ ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಕೆ.ಆರ್. ಶಿಲ್ಪ, ಶಾಲೆಯ ಗೈಡ್ಸ್ ಕ್ಯಾಪ್ಟನ್ ಪಿ.ಪಿ. ಭವ್ಯ ಮಾತನಾಡಿದರು. ಉತ್ತಮವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.