ಮಡಿಕೇರಿ, ಸೆ. ೧೩: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತದಿಂದ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ತಾ. ೩೦ ಕೊನೆ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಮಡಿವಾಳ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನದ ಮಿತಿ ರೂ. ೩.೫೦ ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ ೨೧ ವರ್ಷಗಳಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ವಿದೇಶಿ ವ್ಯಾಸಂಗ ಸಾಲ ಯೋಜನೆ: ಈ ಯೋಜನೆಯಡಿ ವಾರ್ಷಿಕ ವರಮಾನವು ರೂ. ೧೫ ಲಕ್ಷಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಯ ವಯಸ್ಸು ೨೫ (ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿ.ಹೆಚ್.ಡಿ. ಪದವೀಧರರಿಗೆ ೨೭ ವರ್ಷಗಳ ವಯೋಮಿತಿ ನಿಗಧಿಪಡಿಸಲಾಗಿದೆ. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.೩೩ ರಷ್ಟು ವಿಕಲಚೇತನರಿಗೆ ಶೇ. ೫ ರಷ್ಟು, ತೃತೀಯ ಲಿಂಗಿಗಳಿಗೆ ಶೇ. ೧ ರಷ್ಟು ಮೀಸಲಾತಿ ಇರಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ನಿಗಮದ ಯೋಜನೆಗಳು: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಆಧುನಿಕ ಲ್ಯಾಂಡ್ರಿ (ಪ್ರಸ್ತುತ ಸಾಲಿನ ಹೊಸ ಯೋಜನೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ: ಈ ಯೋಜನೆಯಲ್ಲಿ ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಲ್ಲಿನ ಹೆಸರು, ವಿಳಾಸ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿನ ಹೆಸರು ಕಡ್ಡಾಯವಾಗಿ ತಾಳೆಯಾಗಬೇಕು. ಬೆಂಗಳೂರು ಒನ್/ ಕರ್ನಾಟಕ ಒನ್/ ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ ತಿತಿತಿ.ಞmmಜ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:೦೮೦-೨೨೩೭೪೮೩೨/೮೩೩ ಯಿಂದ ಪಡೆಯಬಹುದಾಗಿದೆ. ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮುಖಾಂತರ ಸಂಪರ್ಕಿಸಬಹುದು.
೨೦೨೪-೨೫ ಮತ್ತು ೨೦೨೫-೨೬ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅರ್ಜಿದಾರರನ್ನು ಪ್ರಸ್ತುತ ಸಾಲಿಗೂ ಸಹ ಪರಿಗಣಿಸಲಾಗುವುದು. ೨೦೨೪-೨೫ ಮತ್ತು ೨೦೨೫-೨೬ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಯೋಜನೆಯನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಪ್ರಸ್ತುತ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾಸಿಂಧು ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ...