.ಮಡಿಕೇರಿ, ಸೆ. ೧೩: ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭ ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಎರಡು ದಿನಗಳ ಹಿಂದೆ ಧ್ವನಿವರ್ಧಕಗಳಲ್ಲಿ ಪ್ರೆಷರ್‌ಮಿಡ್‌ಗಳನ್ನು ಅಳವಡಿಸಿರುವುದು ಹಾಗೂ ಪ್ರೆಷರ್ ಮಿಡ್‌ಗಳಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಜಿಲ್ಲೆಯಾದ್ಯಂತ ನಿಷೇಧಿಸಿ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿಗಳು ಗಣೇಶೋತ್ಸವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಢಿದ್ದರು. ಅಲ್ಲದೇ ತಾ. ೧೪ ರಿಂದ ಅಕ್ಟೋಬರ್ ೩೧ರವರೆಗೆ ಜಿಲ್ಲೆಯಾದ್ಯಂತ ಧ್ವನಿವರ್ಧಗಳಲ್ಲಿ ಪ್ರೆಷರ್ ಮಿಡ್ ಅಳವಡಿಸುವುದು ಹಾಗೂ ಪ್ರೆಷರ್ ಮಿಡ್ ಅಳವಡಿಸಿದ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದರು.

ಇದೇ ಆದೇಶಕ್ಕೆ ಪೂರಕವಾಗಿ ಇಂದು ಮತ್ತೊಂದು ಆದೇಶವನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಹೊರಡಿಸಿದ್ದು, ಅದರ ವಿವರ ಹೀಗಿದೆ.

ಕೊಡಗು ಜಿಲ್ಲೆಯಾದ್ಯಂತ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಬ್ದ ಮಾಲಿನ್ಯ ಉಂಟು ಮಾಡುವ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಮತ್ತು ಕೆಲವರು ನಿಗಧಿತ ಮಿತಿಗಿಂತ ಹೆಚ್ಚು ಶಬ್ದ ಹೊರಡಿಸುವ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುವ ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಮತ್ತು ತೊಂದರೆಯಾಗುತ್ತಿರುತ್ತದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಾರ್ವಜನಿಕರ ಒಳಿತಿಗಾಗಿ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಿರ್ದೇಶನಗಳನ್ನು ಮತ್ತು ಸರ್ಕಾರದ ಸುತ್ತೋಲೆಯಲ್ಲಿನ ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸೂಕ್ತ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.

ಅದರಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಹಾಗೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ನಡೆಯುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಸಮಯದಲ್ಲಿ ನಿಯಮಗಳನ್ನು ಪಾಲಿಸಲು ಹಾಗೂ ಧ್ವನಿವರ್ಧಕಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳುವುದು ಸೂಕ್ತವೆಂದು ಮನಗಂಡು. ಕೊಡಗು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಇಟಿviಡಿoಟಿmeಟಿಣ (Pಡಿoಣeಛಿಣioಟಿ) ಂಛಿಣ-೧೯೮೬ ಮತ್ತು ಓoise Poಟಟuಣioಟಿ (ಖeguಟಚಿಣioಟಿ ಚಿಟಿಜ ಅoಟಿಣಡಿoಟ) ಖuಟes-೨೦೦೦ ರ ನಿಯಮಾವಳಿಗಳನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸಬೇಕು.

ನಿಯಮಿತ ಡೆಸಿಬಲ್ (ಜಃ) ಮಿತಿಗಿಂತ ಹೆಚ್ಚು ಶಬ್ದ ಹೊರಡಿಸುವ ಯಾವುದೇ ರೀತಿಯ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ ಗಂಟೆಯ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹಗಲು ಅವಧಿಯಲ್ಲಿ ನಿಯಮಾನುಸಾರ ಧ್ವನಿವರ್ಧಕಗಳನ್ನು ಬಳಸಲು ಇಚ್ಛಿಸುವ ಸಾರ್ವಜನಿಕರು, ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಆಯೋಜಕರು, ಸಂಘ ಸಂಸ್ಥೆಗಳು ಸಂಬAಧಪಟ್ಟ ಸಕ್ರಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಲಿಖಿತ ಪೂರ್ವಾನುಮತಿ ಪಡೆಯಬೇಕು. ಈ ಆದೇಶವನ್ನು ಉಲ್ಲಂಘಿಸಿ ಹೆಚ್ಚಿನ ಶಬ್ದ ಹೊರಡಿಸುವ ಧ್ವನಿವರ್ಧಕಗಳನ್ನು ಬಳಸಿದಲ್ಲಿ, ಅಂತಹ ಉಪಕರಣಗಳನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಸಂಬAಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಜಿಲ್ಲೆ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.