ನಾಪೋಕ್ಲು, ಸೆ. ೧೩: ಕಕ್ಕಬೆ ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರ ತಂಡ ಹಾಕಿ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಬಾಲಕಿಯರು ಹಾಗೂ ಬಾಲಕರ ತಂಡಗಳು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಶಾಲೆಯ ವತಿಯಿಂದ ತಂಡದ ಕ್ರೀಡಾಪಟುಗಳನ್ನು ಗೌರವಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಡಿ. ಅನಿಲ್ ರಾಜ್, ವ್ಯವಸ್ಥಾಪಕ ಶರತ್ ಕೆ.ಎಂ., ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೆ.ಡಿ. ಬೋಪಣ್ಣ ಹಾಜರಿದ್ದರು.