ಮಡಿಕೇರಿ, ಸೆ. ೧೩: ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ ೩೦ ವರ್ಷಗಳಲ್ಲಿ ಗಮನಿಸಿದಾಗ ಈ ಬಾರಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತುಂಬಾ ಕಡಿಮೆಯಾಗಿದೆ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಎಲ್ಲೆಡೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಕರೆ ನೀಡಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ನಗರದ ಅರಣ್ಯ ಭವನದ ಆವರಣದಲ್ಲಿ ನಡೆದ ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ ಹಿನ್ನೆಲೆ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಇರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಮಲೆನಾಡು ಭಾಗದಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಸಹ ಮಳೆಯಾಗುತ್ತಿತ್ತು. ಆದರೆ ಈಗ ಮಳೆ ಇಲ್ಲದಂತಾಗಿ, ಬೇಸಿಗೆ ವಾತಾವರಣ ಕಾಣುತ್ತಿದೆ. ಆದ್ದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಣೆಗೆ ಹಿಂದಿಗಿAತ ಇಂದು ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಅವರು ಪ್ರತಿಪಾದಿಸಿದರು.
ನದಿ, ತೊರೆ, ಹಳ್ಳ-ಕೊಳ್ಳ, ಬಾವಿ ಹಾಗೂ ಬೋರ್‌ವೆಲ್‌ಗಳು ಸಹ ನೀರು ಕ್ಷೀಣಿಸುತ್ತಿದೆ. ಮಳೆ- ಬೆಳೆ ಇಲ್ಲದೆ ಇಂದಿನ ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ ಎಂದರು.
ಭೂಮಿಯ ಮೇಲಿನ ಪರಿಸರ, ಹವಾಮಾನ ಬದಲಾವಣೆಯನ್ನು ಗಮನಿಸಿದಾಗ ಮುಂದಿನ ದಿನಗಳಲ್ಲಿ ಊಹಿಸಿ ಕೊಳ್ಳುವುದು, ಕಷ್ಟ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ ಮಾತನಾಡಿ, ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಅರಣ್ಯ ಸಂರಕ್ಷಣೆಗೆ ಎಲ್ಲರೂ ಸಹ ಕೈಜೋಡಿಸಬೇಕು ಎಂದು ಕೋರಿದರು.
ಪಶ್ಚಿಮಘಟ್ಟ ಪ್ರದೇಶದಲ್ಲಿ ಹೆಚ್ಚಿನ ಆನೆಗಳು ಹಾಗೂ ಹುಲಿಗಳು, ಜೊತೆಗೆ ಜಿಂಕೆ, ಕಡವೆ, ಹೀಗೆ ವನ್ಯ ಪ್ರಾಣಿಗಳು ವಾಸಿಸುತ್ತಿದ್ದು, ಕಾಡನ್ನು ಸಂರಕ್ಷಿಸಿದರೆ ವನ್ಯ ಪ್ರಾಣಿಗಳು ಸಹ ಬದುಕಲು ಸಾಧ್ಯ. ಆ ನಿಟ್ಟಿನಲ್ಲಿ ಪರಿಸರ, ಜನಜೀವನ ಎಲ್ಲವೂ ಸಹ ಸಮತೋಲನ ಕಾಣಬಹುದು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಅಭಿಷೇಕ್ ಮಾತನಾಡಿ, ೧೯೬೬ ರಿಂದ ಇಲ್ಲಿಯವರೆಗೆ ಅರಣ್ಯ ಸಂರಕ್ಷಣೆ ಕರ್ತವ್ಯ ಸಂದರ್ಭದಲ್ಲಿ ಹುತಾತ್ಮರಾದ ಅರಣ್ಯ ರಕ್ಷಕ ೬೫ ಮಂದಿ ಹೆಸರನ್ನು ಓದಿದರು.