ಮಡಿಕೇರಿ, ಸೆ. ೧೩: ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ತಾ. ೧೫ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ೨೦೦೭ರ ಘೋಷಣೆಯಂತೆ ಪ್ರತಿವರ್ಷ ಸೆಪ್ಟೆಂಬರ್ ೧೫ರಂದು ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಕಾನೂನು ಮತ್ತು ನ್ಯಾಯ, ಮಾನವ ಹಕ್ಕುಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲೆಯ ಎಲ್ಲಾ ತಾಲೂಕುಮಟ್ಟದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ನಡೆಸುವಂತೆ ಸಲಹೆ ನೀಡಿದರು.

ಪ್ರಜಾಪ್ರಭುತ್ವದ ಆಶಯಗಳು ಹಾಗೂ ವಿಚಾರಧಾರೆಯನ್ನು ಸಾರ್ವಜನಿಕರಿಗೆ, ವಿಶೇಷವಾಗಿ ಯುವಜನರಿಗೆ ಪರಿಚಯಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಯುವಕರು ಭಾಗವಹಿಸುವಂತೆ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.

ಸೆಪ್ಟೆಂಬರ್ ೧೬ರಿಂದ ನವೆಂಬರ್ ೨೬ರವರೆಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಯುವ ಸಂಸತ್ ಸಭೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಸೆಪ್ಟೆಂಬರ್ ೧೫ರಂದು ಯುವ ಸಂಸತ್ ಸಭೆಗಳಿಗೆ ಚಾಲನೆ ನೀಡಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾರ್ಯಕ್ರಮದ ಸಂದರ್ಭದಲ್ಲಿ ಯುವ ಸಂಸತ್ ಸಭೆಗೂ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.