ಮಡಿಕೇರಿ, ಸೆ. ೧೩: ಉತ್ತರಖಂಡ್ ರಾಜ್ಯದ ಹಲ್ದಾ÷್ವನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಎಫ್.ಐ.ಆರ್ ದಾಖಲಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಾ ಜಾತಿ ಪದ್ಧತಿಯ ವಿಷಬೀಜವನ್ನು ಬಿತ್ತುತ್ತಿರುವವರ ವಿರುದ್ಧ ಜಾತ್ಯಾತೀತ ಶಕ್ತಿಗಳು ಒಂದಾಗಿ ರಾಷ್ಟçದ ಒಳಿತಿಗಾಗಿ ಹೋರಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಮೋಹನ್ ಮೌರ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷÀ ಸೌಖತ್‌ಆಲಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ.ಮೋಹನ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಜಿಲ್ಲಾ ಪ್ರಚಾರ ಸಮಿತಿ ಉಪಾಧ್ಯಕ್ಷ ಕೇಟೋಳಿರ ಮೋಹನ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಪ್ರಚಾರ ಸಮಿತಿ ಕೋಶಾಧಿಕಾರಿ ಹ್ಯಾರಿಸ್ ಕೊಳಕೇರಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.