ಕೂಡಿಗೆ, ಸೆ. ೧೩: ಹೆಬ್ಬಾಲೆ ಗ್ರಾಮದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಹಾಗೂ ರೇಬಿಸ್ ರೋಗ ತಡೆಗಟ್ಟಲು ಅಂತರ ಇಲಾಖೆ ಅಧಿಕಾರಿಗಳ ಮತ್ತು ಗ್ರಾಮದ ಮುಖಂಡರೊAದಿಗೆ ವಿಶೇಷ ಸಭೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಚುಚ್ಚುಮದ್ದು ಹಾಕಿಸುವುದರ ಬಗ್ಗೆ ಹಾಗೂ ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆ ಮಾಡಿಸುವುದರ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಪರವಾಗಿ ಶಿರಂಗಾಲ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಜ್ಮಮಾ ಜಾಫರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಹೆಬ್ಬಾಲೆ ಪಶು ಆಸ್ಪತ್ರೆ ಪಶು ವೈದ್ಯ ಡಾ. ಅಮೃತಾ, ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಣಿ ವೆಂಕಟೇಶ್, ಮಂಜುನಾಥ, ರವಿ ಹಾಗೂ ಹೆಬ್ಬಾಲೆ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಸಂಜಯ್, ಮೇಲ್ವಿಚಾರಕರಾದ ನಾಗೇಂದ್ರಚಾರಿ, ಲತಾ ಕುಮಾರಿ ಹಾಜರಿದ್ದರು.