ಕಡಂಗ, ಸೆ. ೧೫: ವೀರಾಜಪೇಟೆ ಸಮೀಪದ ಅಂಬಟ್ಟಿಯ ಮಕ್ಕಾಂ ಜುಮ್ಮಾ ಮಸೀದಿ ಹಾಗೂ ತನ್ವೀರುಲ್ ಇಸ್ಲಾಂ ಮದ್ರಸಾ ಸಂಯುಕ್ತ ಆಶ್ರಯದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿAದ ಆಚರಿಸ ಲಾಯಿತು. ಮದ್ರಸಾ ವಿದ್ಯಾರ್ಥಿಗಳು, ಊರಿನ ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಒಗ್ಗೂಡಿ ಮದ್ಹ್ ಗಾನ ಹಾಗೂ ಆಕರ್ಷಕ ದಫ್ ಪ್ರದರ್ಶನದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮದ್ರಸಾ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ದಫ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು ಮತ್ತು ಹಿರಿಯರು ಪ್ರವಾದಿ ಮುಹಮ್ಮದ್ (ಸ.ಅ) ಅವರ ಜೀವನ ಚರಿತ್ರೆ, ಆದರ್ಶಗಳು ಹಾಗೂ ಸಂದೇಶಗಳನ್ನು ಮದ್ಹ್ ಗೀತೆಗಳು ಮತ್ತು ಭಾಷಣಗಳ ಮೂಲಕ ಪ್ರಸ್ತುತಪಡಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.