ಕುಶಾಲನಗರ: ಗೌರಿ ಗಣೇಶ ಹಬ್ಬ ಅಂಗವಾಗಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು ೩೬ ಕಡೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು,

ವಿವಿಧ ಸಂಘ ಸಂಸ್ಥೆಗಳ ಮೂಲಕ ಪ್ರತಿಷ್ಠಾಪಿಸಲ್ಪಟ್ಟ ಗಣಪತಿ ಪೆಂಡಾಲ್‌ಗಳಲ್ಲಿ ಪ್ರಸಾದ ವಿತರಣೆ ಅನ್ನದಾನ ಕಾರ್ಯಕ್ರಮ ನಡೆಯಿತು.

ಸೋಮವಾರ ಸಂಜೆ ವೇಳೆಗೆ ೧೦ ಗಣೇಶ ಮೂರ್ತಿಗಳನ್ನು ಮೆರವಣಿಗೆ ಮೂಲಕ ತೆರಳಿ ವಿಸರ್ಜನೆ ಮಾಡಲಾಯಿತು. ಬುಧವಾರ ೧೫ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.

ಕುಶಾಲನಗರ ಗಣಪತಿ ದೇವಾಲಯದಲ್ಲಿ ಗೌರಿ ಗಣೇಶ ಹಬ್ಬ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಬೆಳಗಿನಿಂದಲೇ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಪೂಜೆ ಸಲ್ಲಿಸಿದರು. ಅರ್ಚಕರಾದ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು.

ಕುಶಾಲನಗರ ಗಣಪತಿ ದೇವಾಲಯ ಬಳಿ ಶ್ರೀ ಸೂರ್ಯ ವಿನಾಯಕ ಗೆಳೆಯರ ಬಳಗ ಸೇರಿದಂತೆ ಬೈಚನಹಳ್ಳಿ, ಮುಳ್ಳುಸೋಗೆ ಮತ್ತು ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲ್ಪಟ್ಟ ೧೦ ಗಣಪತಿ ವಿಗ್ರಹಗಳನ್ನು ಅದ್ದೂರಿಯಾಗಿ ಮೆರವಣಿಗೆ ನಡೆಸುವ ಮೂಲಕ ಕಾವೇರಿ ನದಿ ತಟದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.

ಸಮೀಪದ ಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಗಣಪತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಅದ್ದೂರಿಯಾಗಿ, ಸಂಭ್ರಮದಿAದ ಆಚರಿಸಲಾಯಿತು.