ಮಡಿಕೇರಿ, ಸೆ.೧೫: ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ೨೦೨೬-೨೭ ನೇ ಸಾಲಿನ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಕ್ಟೋಬರ್ ೧೭ ರಂದು ಜರುಗಲಿದೆ.

ಈ ಕುರಿತು ಪೂರ್ವ ಸಿದ್ದತೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಹಳೇ ಮುಡಿ ಕಟ್ಟಡದಲ್ಲಿ ತಾ. ೧೬ ರಂದು (ಇಂದು) ಮಧ್ಯಾಹ್ನ ೩.೩೦ ಗಂಟೆಗೆ ಪೂರ್ವಭಾವಿ ಸಭೆ ನಡೆಯಲಿದೆ ಎಂದು ದೇವಾಲಯದ ಇಓ ಚಂದ್ರಶೇಖರ್ ತಿಳಿಸಿದ್ದಾರೆ.