ಮಡಿಕೇರಿ, ಸೆ. ೧೫: ೨೦೨೬-೨೭ನೇ ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆಯ ಬಯಸುವವರಿಗೆ ಆನ್‌ಲೈನ್ ಮೂಲಕ (ಸೇವಾ ಸಿಂಧೂ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಅರಿವು ಶೈಕ್ಷಣಿಕ ಸಾಲ ಯೋಜನೆ: ಕರ್ನಾಟಕ ರಾಜ್ಯದಲ್ಲಿ ವೃತ್ತಿಪರ, ತಾಂತ್ರಿಕ ಇತ್ಯಾದಿ ಉನ್ನತ ಕೋರ್ಸ್ಗಳ ವ್ಯಾಸಂಗಕ್ಕೆ ಪ್ರವೇಶ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ಎನ್.ಇ.ಇ.ಟಿ) ಸೀಟು ಪಡೆದು ಕಾಲೇಜಿಗೆ ಸೇರ್ಪಡೆಯಾದವರಿಗೆ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲದ ಮೊತ್ತಕ್ಕೆ ವಾರ್ಷಿಕವಾಗಿ ಗರಿಷ್ಠ ರೂ.೧ ಲಕ್ಷಗಳಂತೆ ಕೋರ್ಸ್ ಅವಧಿಗೆ ಶೇ.೨ರ ಬಡ್ಡಿ ದರದಲ್ಲಿ ಸಾಲ ನೀಡುವುದು.

ಕುಟುಂಬದ ವಾರ್ಷಿಕ ವರಮಾನವು ಎಲ್ಲಾ ಮೂಲಗಳಿಂದ ರೂ.೩.೫೦ ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ವಯಸ್ಸು ೩೫ ವರ್ಷ ಮೀರಿರಬಾರದು. ವಿದ್ಯಾರ್ಥಿಯು ಸರ್ಕಾರಿ ಕಾಲೇಜು/ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ, ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗದ ಕೋರ್ಸ್ಗಳಲ್ಲಿ ಸಿ.ಇ.ಟಿ/ಎನ್.ಇ.ಇ.ಟಿ ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು. ವಿದ್ಯಾರ್ಥಿಯು ಶೈಕ್ಷಣಿಕ ಉದ್ದೇಶಕ್ಕೆ ಇತರೆ ಯಾವುದೇ ಬ್ಯಾಂಕ್/ಆರ್ಥಿಕ ಸಂಸ್ಥೆಗಳಿAದ ಸಾಲ ಪಡೆದಿರಬಾರದು.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ೨೦೨೨-೨೩, ೨೦೨೩-೨೪, ೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ಸಾಲ ಪಡೆದ ಅರ್ಹ ವಿದ್ಯಾರ್ಥಿಗಳು ೨೦೨೬-೨೭ನೇ ಸಾಲಿನಲ್ಲಿ ಮುಂದುವರಿದ ಕಂತುಗಳ ೨,೩,೪ ಮತ್ತು ೫ನೇ ಕಂತಿನ(ನವೀಕರಣ)ಸಾಲ ಪಡೆಯಲು ವರ್ಷದ ವ್ಯಾಸಂಗ ದೃಢೀಕರಣ ಮತ್ತು ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು ೨೦೨೫-೨೬ನೇ ಸಾಲಿನಲ್ಲಿ ಸಾಲ ಪಡೆದ ಅರ್ಹ ವಿದ್ಯಾರ್ಥಿಗಳು ೨೦೨೬-೨೭ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಮುಂದುವರಿದ ಕಂತು ೨ನೇ ಕಂತಿನ (ನವೀಕರಣ)ಸಾಲ ಪಡೆಯಲು ವರ್ಷದ ವ್ಯಾಸಂಗ ದೃಢೀಕರಣ, ಅಂಕಪಟ್ಟಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು.

ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯ ಧನ ಯೋಜನೆ: ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಸಾಲ ಸೌಲಭ್ಯ ಒದಗಿಸಲಾಗುವುದು.

ಘಟಕ ವೆಚ್ಚ ರೂ.೧ ಲಕ್ಷಗಳಿಗೆ ಶೇ.೨೦ರಷ್ಟು ಗರಿಷ್ಠ ರೂ.೨೦ ಸಾವಿರ ಸಹಾಯಧನ ಉಳಿಕೆ ಶೇ.೮೦ರಷ್ಟು ಗರಿಷ್ಠ ರೂ.೮೦ ಸಾವಿರಗಳ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

ಘಟಕ ವೆಚ್ಚ ರೂ.೧,೦೦,೦೦೧ ರಿಂದ ರೂ.೨ ಲಕ್ಷಗಳವರೆಗೆ ಶೇ.೧೫ರಷ್ಟು ಗರಿಷ್ಠ ರೂ.೩೦ ಸಾವಿರಗಳ ಸಹಾಯಧನ ಉಳಿಕೆ ಶೇ.೮೫ ರಷ್ಟು ರೂ ೧.೭೦ ಲಕ್ಷಗಳಿಗೆ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಸೂಕ್ತ ಅಡಮಾನ ಮಾಡಿದ್ದಲ್ಲಿ ಸಾಲ ಮಂಜೂರು ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ hಣಣಠಿ://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ದೂ.ಸಂ.೦೮೦-೨೨೮೬೪೦೯೯ ಅನ್ನು ಸಂಪರ್ಕಿಸುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ೨೦೨೪-೨೫ ಮತ್ತು ೨೦೨೫-೨೬ನೇಸಾಲಿನಲ್ಲಿ (ಸ್ವಯಂ ಉದ್ಯೋಗ ನೇರಸಾಲ ಯೋಜನೆ) ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿAದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.