ಮಡಿಕೇರಿ, ಸೆ. ೧೫: ಪೊನ್ನಂಪೇಟೆ ಸಾಯಿ ಶಂಕರ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಪುಟಾಣಿ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆಯ ವೇಷಭೂಷಣಗಳಲ್ಲಿ ಕಂಗೊಳಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಕೃಷ್ಣನ ಕುರಿತ ನೃತ್ಯ ಹಾಗೂ ಗೀತೆಗಳ ಪ್ರದರ್ಶನ ನಡೆಯಿತು. ವಿವಿಧ ಕೃಷ್ಣ-ರಾಧೆಯ ವೇಷಗಳಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮೆರೆದರು.ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ ಛದ್ಮವೇಷ ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಗಾನಾ ಕಾರ್ಯಪ್ಪ ಮತ್ತು ರಮ್ಯ, ಪ್ರಾಂಶುಪಾಲರಾದ ನಾರಾಯಣ್, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ ಮಕ್ಕಳ ಪೋಷಕರು ಭಾಗವಹಿಸಿದ್ದರು.