ಮಡಿಕೇರಿ, ಸೆ. ೧೬: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ೮ ಬೆರಳಚ್ಚುಗಾರರ ವೃಂದದ ೭ ಹೊಸ ಹುದ್ದೆಗಳು ಹಾಗೂ ೧ ಹಿಂಬಾಕಿ(ಬ್ಯಾಕ್‌ಲಾಗ್) ಹುದ್ದೆ ಸೇರಿದಂತೆ ಒಟ್ಟು ೮ ಹುದ್ದೆಗಳು, ೦೨ ಚಾಲಕರ ಹುದ್ದೆಗಳು ಹಾಗೂ ೬ ಆದೇಶಿಕ ಜಾರಿಕಾರ ಹುದ್ದೆಗಳು ಮತ್ತು ಜವಾನ/ ಸೇವಕ ವೃಂದದ ೨೩ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ hಣಣಠಿs://ಞoಜಚಿgu.ಜಛಿouಡಿಣs.gov.iಟಿ/oಟಿಟiಟಿe-ಡಿeಛಿಡಿuiಣmeಟಿಣ ರಲ್ಲಿ ನೀಡಲಾಗುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಒಮ್ಮೆ ಮಾತ್ರ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಯಾವುದೇ ಅಭ್ಯರ್ಥಿಯು ಒಂದಕ್ಕಿAತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಕೊನೆಯದಾಗಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು ಹಾಗೂ ಉಳಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ ೩ ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಕ್ಟೋಬರ್ ೩ ರಾತ್ರಿ ೧೧.೫೯ ಗಂಟೆವರೆಗೆ ಸಮಯವಿದೆ.

ಸಾಮಾನ್ಯ ಅಭ್ಯರ್ಥಿಗಳ ವಯೋಮಿತಿ ೪೦ ವರ್ಷ, ಪ್ರವರ್ಗ-೨(ಎ), ೨(ಬಿ), ೩(ಎ) ಮತ್ತು ೩(ಬಿ) ಅಭ್ಯರ್ಥಿಗಳಿಗೆ ೪೩ ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧ರ ಅಭ್ಯರ್ಥಿಗಳಿಗೆ ವಯೋಮಿತಿ ೪೫ ವರ್ಷ ಆಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ hಣಣಠಿs://ಞoಜಚಿgu.ಜಛಿouಡಿಣs.gov.iಟಿ/oಟಿಟiಟಿe-ಡಿeಛಿಡಿuiಣmeಟಿಣ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು-ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾರುತಿ ಎಸ್. ಬಾಗಡೆ ಅವರು ತಿಳಿಸಿದ್ದಾರೆ.