ಶ್ರೀಮಂಗಲ, ಸೆ. ೧೬: ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿ ಗ್ರಾಮದ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿ, ಚೀಪೆಕೊಲ್ಲಿಯಲ್ಲಿ ರೂ. ೧೨ ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು ಕಾಮಗಾರಿ ಶೀಘ್ರ ಆರಂಭಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಸಲಹೆ ನೀಡಿದರು.
ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ತೀತಿರ ಪ್ರಭು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷÀ ಆಪಟ್ಟಿರ ಟಾಟು ಮೊಣ್ಣಪ್ಪ, ಡಿಸಿಸಿ ಸದಸ್ಯ ಪೆಮ್ಮಂಡ ರಾಜ ಕುಶಾಲಪ್ಪ, ಪಕ್ಷದ ಮುಖಂಡ ಅಪ್ಪಚ್ಚಂಗಡ ಮೋಟಯ್ಯ, ಚೊಟ್ಟೆಯಾಂಡಮಾಡ ವಿಶು, ಉದಯ, ತಾ.ಪಂ. ಮಾಜಿ ಸದಸ್ಯ ಪಲ್ವಿನ್ ಪೂಣಚ್ಚ, ಆಲೇಮಾಡ ಸೋಮಣ್ಣ, ವಕೀಲ ಮಚ್ಚಮಾಡ ಟಿ ಕಾರ್ಯಪ್ಪ, ಕೊಲ್ಲಿರ ಬೋಪಣ್ಣ, ಕೋಟ್ರಮಾಡ ವಿಜು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಇದ್ದರು.