ಸೋಮವಾರಪೇಟೆ, ಸೆ. ೧೬: ಸೋಮವಾರಪೇಟೆ ಹೋಂ ಸ್ಟೇ ಅಸೋಸಿಯೇಷನ್ ವತಿಯಿಂದ ಕಾಸರಗೋಡು-ಕಣ್ಣೂರು ಜಿಲ್ಲೆಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿತ್ತು.

ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ. ರೋಹಿತ್ ಅವರು ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರವಾಸದ ಸಂದರ್ಭದಲ್ಲಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು ಹಾಗೂ ಪ್ರವಾಸೋದ್ಯಮಕ್ಕೆ ಸಂಬAಧಿಸಿದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ, ಅಲ್ಲಿನ ಪ್ರವಾಸೋದ್ಯಮ ವ್ಯವಸ್ಥೆ ಮತ್ತು ಹೋಮ್‌ಸ್ಟೇ ಚಟುವಟಿಕೆಗಳ ಕುರಿತು ಸದಸ್ಯರು ಅಧ್ಯಯನ ನಡೆಸಿದರು.

ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್ ಎಸ್.ಎಲ್., ಖಜಾಂಚಿ ಪ್ರೀತಮ್ ಡಿ.ಪಿ. ಸೇರಿದಂತೆ ಸದಸ್ಯರು ಪ್ರವಾಸದಲ್ಲಿ ಭಾಗವಹಿಸಿದ್ದರು.