ವೀರಾಜಪೇಟೆ, ಸೆ. ೧೬: ೨೦೨೬-೨೭ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ವೀರಾಜಪೇಟೆ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಲೇಜಿನ ವಿದ್ಯಾರ್ಥಿನಿಯರಾದ ರಿಫಾ ಹಾಗೂ ಕೀರ್ತಿಕಾ ಅವರು ಜಯಶೀಲರಾಗುವ ಮೂಲಕ ಜಿಲ್ಲಾಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದÀ ಶೈನಾ ಕೆ.ಕೆ. ಅವರು ತಿಳಿಸಿದ್ದಾರೆ.