ಮಡಿಕೇರಿ, ಸೆ.೧೬: ಇಡೀ ವಿಶ್ವದಲ್ಲಿ ಭಾರತವು ಬೃಹತ್ ಸಂವಿಧಾನ ಹೊಂದಿದ್ದು, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತ ಸಂವಿಧಾನವು ಮೂಲತಃ ೩೯೫ ವಿಧಿಗಳನ್ನು ಹೊಂದಿದ್ದು, ಪ್ರಸ್ತುತ ೨೫ ಭಾಗಗಳಲ್ಲಿ ಸುಮಾರು ೪೪೮ ಕ್ಕೂ ಹೆಚ್ಚು ವಿಧಿಗಳು ಹಾಗೂ ೧೨ ಅನುಸೂಚಿಗಳನ್ನು ಒಳಗೊಂಡು ಬೃಹತ್ ಸಂವಿಧಾನ ಹೊಂದಿದೆ ಎಂದು ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ಪಾಲಿಸಬೇಕು.

ಸರ್ಕಾರ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಯುವ ಸಂಸತ್‌ಗೆ ಇಂದಿನಿAದ ಚಾಲನೆ ನೀಡಿದ್ದು, ಈ ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕೊಡಗು ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು ಎಂದು ಅವರು ಸಲಹೆ ಮಾಡಿದರು. ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಕೆ.ಸಿ. ದಯಾನಂದ ಅವರು ಪ್ರಜಾಪ್ರಭುತ್ವ ಒಂದು ಕೇವಲ ಆಡಳಿತ ವ್ಯವಸ್ಥೆಯಲ್ಲ. ಅದು ಜೀವನದ ಮೌಲ್ಯ ಆಗಿದೆ ಎಂದರು.

ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಪ್ರಜಾಪ್ರಭುತ್ವದ ತತ್ವಗಳು, ಮೌಲ್ಯಗಳನ್ನು ಸಂರಕ್ಷಿಸುವುದು ಮತ್ತು ಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ೨೦೦೭ ರಲ್ಲಿ ಸೆಪ್ಟೆಂಬರ್, ೧೫ ರಂದು ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ ಎಂದರು.

ಗ್ಯಾರAಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಣಪತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಪ್ರಮುಖರಾದ ಎಚ್.ಎಲ್.ದಿವಾಕರ, ಗಾಯತ್ರಿ, ಎಚ್.ಎಲ್.ಕುಮಾರ, ಪ್ರೇಮ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಇದ್ದರು.

ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಸಂವಿಧಾನ ಪೀಠಿಕೆ ಓದಿದರು. ಲಹರಿ ತಂಡದವರು ವಂದೇ ಮಾತರಂ, ನಾಡಗೀತೆ, ರೈತಗೀತೆ ಹಾಡಿದರು. ಪವನ್ ಕುಮಾರ್ ನಿರೂಪಿಸಿ, ವಂದಿಸಿದರು.