ಮಡಿಕೇರಿ, ಸೆ. ೧೬: ಭಾಗಮಂಡಲ ನಾಡು ಗೌಡ ಸಮಾಜದ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ರೂ. ೧ ಕೋಟಿ ಅನುದಾನವನ್ನು ಮಂಜೂರು ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ. ಅಶ್ವತ್ಥ ಅವರು ಆದೇಶ ಹೊರಡಿಸಿರುವುದಾಗಿ ವೀರಾಜ ಪೇಟೆ ಶಾಸಕ ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ತಿಳಿಸಿದ್ದಾರೆ.