ನಾಪೋಕ್ಲು, ಸೆ. ೧೮: ಕಡಗದಾಳು ಸರಕಾರಿ ಪ್ರೌಢಶಾಲೆಯಲ್ಲಿ ೨೦೨೬- ೨೭ನೇ ಸಾಲಿನ ದಿ. ಮಂಡೇಪAಡ ಅಕ್ಕಮ್ಮ ಗಣಪತಿ ದತ್ತಿ ಉಪನ್ಯಾಸ ಮತ್ತು ದಿ. ದಂಬೆಕೋಡಿ ಚಿಣ್ಣಪ್ಪ ದತ್ತಿ ಪುರಸ್ಕಾರ ಕಾರ್ಯಕ್ರಮ ತಾ. ೧೯ ರಂದು (ಇಂದು) ಪೂರ್ವಾಹ್ನ ೧೧ ಗಂಟೆಗೆ ಜರುಗಲಿದೆ.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಡಗದಾಳು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಡೈಸಿ ಸಿ.ಸಿ. ನೆರವೇರಿಸುವರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕ ನುಡಿಯಾಡಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು, ದಂಬೆಕೋಡಿ ಲೀಲಾವತಿ ಚಿಣ್ಣಪ್ಪ (ದತ್ತಿ ದಾನಿಗಳು), ಟಿ.ಪಿ. ರಮೇಶ್ ಮಾಜಿ ಅಧ್ಯಕ್ಷರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊರವಂಡ ರೇವತಿ ತಿಮ್ಮಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.