ಮಂಗಳೂರು. ಸೆ. ೧೮: ತುಳು ಭಾಷೆಗೆ ೨ ಸಾವಿರ ವರ್ಷಗಳ ಇತಿಹಾಸವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತುಳುಭಾಷೆ ಮಾತನಾಡುತ್ತಾರೆ. ಹಾಗಾಗಿ ಈ ಎರಡು ಜಿಲ್ಲೆಗೆ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸಾರ್ವಜನಿಕರಿಂದ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಈ ಸಂಬAಧ ಸಾರ್ವಜನಿಕರು ಒಂದು ತಿಂಗಳಲ್ಲಿ ಅಭಿಪ್ರಾಯ ನೀಡಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಕರಾವಳಿ, ಮಲೆನಾಡು ಭಾಗದಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ ೨೦೨೬ ಜಾರಿಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹೊಸ ಪ್ರವಾಸೋದ್ಯಮ ನೀತಿಯಿಂದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಮೂಲ ಸೌಲಭ್ಯ ಅಭಿವೃದ್ಧಿಗೆ ಒಳಿತಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬAಧಿಸಿದAತೆ ತನ್ನ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರವಾಸೋದ್ಯಮ ಮಂಡಳಿ ಸ್ಥಾಪಿಸಲಾಗುವುದು. ಇದಕ್ಕಾಗಿ ೫೦೦ ಕೋಟಿ ರೂ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ಸಮಗ್ರ ಕರ್ನಾಟಕ -ಸಮೃದ್ಧಿ ಕರ್ನಾಟಕ ಆಗಬೇಕು ಎಂಬುವುದು ಸರಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾತನಾಡಿ, ಇದೊಂದು ಐತಿಹಾಸಿಕ ಸಂಪುಟ ಸಭೆಯಾಗಿದ್ದು, ಮೂಲ ಸೌಲಭ್ಯ ಬಂದರು ಒಳನಾಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ನೇಮಕಾತಿಯಲ್ಲಿ ಆದಿವಾಸಿ ಬುಡಕಟ್ಟು ಸಮಾಜದವರಿಗೆ ಶೇ.೩೦ ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಅವರು ಹೇಳಿದರು. ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಸೋಲಿಗ, ಜೇನುಕುರುಬ, ಕಾಡುಕುರುಬ, ಬೆಟ್ಟಕುರುಬ, ಪಣಿಯ, ಎರವ, ಕುಡಿಯ, ಮಲೆಕುಡಿಯ, ಹಲಸರು, ಸಿದ್ದಿ, ಕೊರಗರು ಮತ್ತಿತರ ಬುಡಕಟ್ಟು ಜನಾಂಗಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ವಿಶೇಷ ಪ್ರಾಧಾನ್ಯತೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದೊಂದು ಐತಿಹಾಸಿಕ ದಾಖಲೆ ಎಂದು ಹೇಳಿದರು.
ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ವಿಜಯಾನಂದ್ ಕಾಶಪ್ಪನವರ್, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.