ಮಡಿಕೇರಿ, ಸೆ.೧೯: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆ ಆಗಿರುವ ಹಿನ್ನೆಲೆ ವೀರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಸಂಬAಧ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಶನಿವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.

ಎಲ್-ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ಕೈಕೊಟ್ಟಿರುವ ಹಿನ್ನೆಲೆ ಶೇ.೩೩ ರಿಂದ ೫೦ ರಷ್ಟು ಕಡಿಮೆ ಮಳೆಯಾಗಿರುವ ತಾಲೂಕನ್ನು ಬರ ಪೀಡಿತವೆಂದು ಸರ್ಕಾರ ಪ್ರಕಟಿಸಿದ್ದು, ಈ ಹಿನ್ನೆಲೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಒದಗಿಸುವ ಬಗ್ಗೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭ ಮಾತನಾಡಿದ ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜು ದೊಡ್ಡಮನಿ ಅವರು ಈಗಾಗಲೇ ಜಾನುವಾರುಗಳಿಗೆ ಮೇವು ದಾಸ್ತಾನು ಇದ್ದು, ೪೬ ವಾರಗಳ ಕಾಲ ಬರುವಷ್ಟು ಮೇವು ದಾಸ್ತಾನು ಇಡಲಾಗಿದೆ.

ಕೊಡಗು ಜಿಲ್ಲೆಗೆ ೨೩೪೦ ಮೇವಿನ ಬೀಜದ ಕಿಟ್ಟು ವಿತರಿಸಲು ಹಂಚಿಕೆ ಆಗಿದ್ದು, ಶೀಘ್ರದಲ್ಲಿ ಮೇವಿನ ಬೀಜದ ಕಿಟ್ಟನ್ನು ವಿತರಿಸಲಾಗುತ್ತದೆ . ಹಾಲು ನೀಡುವ ಹಸುಗಳಿಗೆ ಹೆಚ್ಚು ಪ್ರೊಟೀನ್ ಯುಕ್ತ ಮೇವು ನೀಡುವಲ್ಲಿ ಅಜೋಲ ಬೆಳೆಸಲು ೨೫೦ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಜೊತೆಗೆ ಹಾಲು ಒಕ್ಕೂಟದಿಂದಲೂ ಮೇವಿನ ಬೀಜದ ಕಿಟ್ಟನ್ನು ವಿತರಿಸಲು ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಜಲಜೀವನ್ ಮಿಷನ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಭಾಸ್ಕರ್ ಜಿಲ್ಲೆಯಲ್ಲಿ ಡಿಸೆಂಬರ್‌ವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ತೊಂದರೆಯಿಲ್ಲ. ಸರ್ಕಾರದಿಂದ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದAತೆ ಗಮನಹರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈಗಾಗಲೇ ಮಾಧ್ಯಮಗಳಲ್ಲಿ ಜಲಮೂಲಗಳು ಬತ್ತಿ ಹೋಗುತ್ತಿವೆ ಎಂಬ ವರದಿಗಳು ಬರುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.

ಕುಡಿಯುವ ನೀರಿನ ಅಭಾವ ಕಂಡು ಬಂದಿರುವ ಹಾಗೂ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯವಾಗಿ ಹತ್ತಿರದಲ್ಲಿರುವ ಹೆಚ್ಚು ನೀರು ಇಳುವರಿ ಹಾಗೂ ಗುಣಮಟ್ಟದ ಕೊಳವೆ ಬಾವಿಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸುವಂತೆ ಹಾಗೂ ಗ್ರಾಮೀಣ ಪ್ರದೇಶದ ಜೊತೆಗೆ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಈ ಸಂದರ್ಭ ಮಾತನಾಡಿದ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ್ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ನೋಡಿಕೊಳ್ಳಲಾಗುವುದು ಎಂದರು. ಜಿಲ್ಲಾಧಿಕಾರಿ ಸೋಮಶೇಖರ್ ಮಾತನಾಡಿ ಪಶುಪಾಲನೆ, ಕೃಷಿ, ಕುಡಿಯುವ ನೀರು ಇಂಜಿನಿಯರ್ ವಿಭಾಗ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳು ತಮ್ಮ ಹಂತದಲ್ಲಿ ಬರ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಸೂಚಿಸಿದರು.