ಶಿವಮೊಗ್ಗ, ಸೆ. ೧೯: ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಸಾಂಪ್ರದಾಯಿಕ ಅರಣ್ಯ ಒತ್ತುವರಿದಾರರಿಗೆ ಯಾವುದೇ ಕಾರಣಕ್ಕೂ ನೋಟಿಸ್ ನೀಡಬಾರದು ಹಾಗೂ ಹೊಸದಾಗಿ ಒತ್ತುವರಿಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ‘ಕಸ್ತೂರಿರಂಗನ್ ವರದಿ ಹಾಗೂ ಮಲೆನಾಡಿನ ಸಮಸ್ಯೆಗಳು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ೯೪ಸಿ ಹಾಗೂ ಬಗರ್‌ಹುಕುಂ ಭೂಮಿ ಮತ್ತು ಹಕ್ಕುಪತ್ರಗಳಿಗೆ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ ದಿನಗಳಲ್ಲಿ ಪ್ರತ್ಯೇಕ ಚರ್ಚೆ ನಡೆಸಲಾಗುವುದು..
ಕಸ್ತೂರಿರಂಗನ್ ವರದಿಯಿಂದ ಮಲೆನಾಡಿನ ಜನರ ಬದುಕಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವುದರ ಪರಿಸರವನ್ನೂ ರಕ್ಷಿಸಲು ಸರ್ಕಾರ ಶಕ್ತಿಮೀರಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಕಸ್ತೂರಿರಂಗನ್ ವರದಿಯ ಕರಡು ಅಧಿಸೂಚನೆ ಹೊರಡಿಸಿದೆ. ವಿಧಾನಸೌಧದಲ್ಲಿ ಕುಳಿತು ವರದಿಯನ್ನು ವಿರೋಧಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಜನರಿಂದ ಅಧಿಕಾರಕ್ಕೆ ಬಂದಿರುವ ಕಾರಣ, ನೇರವಾಗಿ ಜನರ ಬಳಿಗೇ ಬಂದು ಅವರ ಆತಂಕ ಹಾಗೂ ಅಭಿಪ್ರಾಯಗಳನ್ನು ತಿಳಿದುಕೊಂಡು ಕೇಂದ್ರಕ್ಕೆ ರಾಜ್ಯದ ನಿಲುವನ್ನು ತಿಳಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ ಎಂದರು.
ಮಲೆನಾಡಿನಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ವಿಸ್ತರಿಸುವ ಉದ್ದೇಶ ಸರ್ಕಾರದ ಮುಂದಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗ ಮತ್ತು ಆದಾಯ ಸೃಷ್ಟಿಸಲಾಗುವುದು. ಇದರಿಂದ ಉದ್ಯೋಗಕ್ಕಾಗಿ ಮಲೆನಾಡಿನಿಂದ ಜನರು ಹೊರಗೆ ವಲಸೆ ಹೋಗುವುದು ತಪ್ಪಲಿದೆ ಎಂದು ಹೇಳಿದರು.