ಮಡಿಕೇರಿ, ಸೆ.೧೯: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್ಲಾವೆಡ್ ಇಂಡಿಯಾ ಫೌಂಡೇಷನ್ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವು ತಾ. ೨೧ ಮತ್ತು ೨೨ ರಂದು ನಡೆಯಲಿದೆ.
ತಾ. ೨೧ ರಂದು ಬೆಳಗ್ಗೆ ೧೦ ಗಂಟೆಗೆ ಮಡಿಕೇರಿ ನ್ಯಾಯಾಲಯದ ಆವರಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್.ಬಾಗಡೆ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ತರಬೇತುದಾರರಾದ ಶಮಾ ಡಿ., ನಿಹಾರಿಕಾ ನಾಯ್ಡು, ಇತರರು ಪಾಲ್ಗೊಳ್ಳಲಿದ್ದಾರೆ.