ಮಡಿಕೇರಿ, ಸೆ. ೨೦: ಕೊಡಗು ಜಿಲ್ಲೆಯಲ್ಲಿ ಕೊಡವ ಮತ್ತು ಅರೆಭಾಷೆಗಳನ್ನು ಅಧಿ ಕೃತ ಭಾಷೆಗಳನ್ನಾಗಿ ಘೋಷಿಸು ವಂತೆ ಈ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೊಡಗಿನಲ್ಲಿ ಈ ಎರಡೂ ಭಾಷೆಗಳು ಮೂಲವಾಗಿದ್ದು, ಅವುಗಳನ್ನು ರಕ್ಷಿಸುವ ಮತ್ತು ಬೆಳೆಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ಮಾನ್ಯತೆಗೆ ಹರಿಪ್ರಸಾದ್ ಒತ್ತಾಯ
ತುಳು ಭಾಷೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಕೊಡವ ಭಾಷೆಗೂ ಸಂವಿಧಾನಿಕ ಮಾನ್ಯತೆ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಂವಿಧಾನ ಮಾನ್ಯತೆಗೆ ಹರಿಪ್ರಸಾದ್ ಒತ್ತಾಯ
(ಮೊದಲ ಪುಟದಿಂದ) ಸಚಿವ ಸಂಪುಟದ ನಿರ್ಧಾರವನ್ನು ಸ್ವಾಗತಿಸಿದ ಅವರು, ಇದೀಗ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಲ್ಲೂ ನಿರ್ಣಯ ಅಂಗೀಕರಿಸಿ, ತುಳು ಹಾಗೂ ಕೊಡವ ಭಾಷೆಗಳನ್ನು ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಿದರು.
“ತುಳು ಹಾಗೂ ಕೊಡವ ಭಾಷೆಗಳನ್ನು ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರಕ್ಕೆ ಕಳುಹಿಸಲು ಸರ್ಕಾರ ಉಭಯ ಸದನಗಳಲ್ಲೂ ನಿರ್ಣಯ ಅಂಗೀಕರಿಸಬೇಕು,” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಕೊಡವ ಭಾಷೆಗೆ ಸಂವಿಧಾನಿಕ ಮಾನ್ಯತೆ ನೀಡಬೇಕೆಂಬ ಬೇಡಿಕೆ ಹೊಸದಲ್ಲ. ಈ ಹಿಂದೆ ಹರಿಪ್ರಸಾದ್ ಅವರು ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿ, ಕೊಡವ ಮತ್ತು ತುಳು ಭಾಷೆಗಳನ್ನು ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸುವಂತೆ ಒತ್ತಾಯಿಸಿದ್ದರು. ಎರಡೂ ಭಾಷೆಗಳ ಭಾಷಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯ ಮತ್ತು ದೀರ್ಘಕಾಲದ ಮಾನ್ಯತೆ ಬೇಡಿಕೆಯನ್ನು ಮಸೂದೆಯಲ್ಲಿ ಉಲ್ಲೇಖಿಸಲಾಗಿತ್ತು.
ಪ್ರಸ್ತುತ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಕನ್ನಡ, ಮಲಯಾಳಂ, ತಮಿಳು, ತೆಲುಗು, ಕೊಂಕಣಿ ಸೇರಿದಂತೆ ಒಟ್ಟು ೨೨ ಭಾಷೆಗಳು ಸೇರಿವೆ. ಕೊಡವ ಹಾಗೂ ತುಳು ಭಾಷೆಗಳು ಈ ಪಟ್ಟಿಯಲ್ಲಿ ಇನ್ನೂ ಸ್ಥಾನ ಪಡೆದಿಲ್ಲ.