*ಗೋಣಿಕೊಪ್ಪ: ಭಾರತ ಹಿಂದುತ್ವದ ಪರಂಪರೆ, ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವುದೇ ನಿಜವಾದ ದೇಶಭಕ್ತಿಯ ಭಾಗವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಲನ್ ಗಣಪತಿ ಅಭಿಪ್ರಾಯಪಟ್ಟರು.

ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ೧೫ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮೂರನೇ ದಿನದಲ್ಲಿ ನಡೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಡೋಲಕ್ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪ್ರಮೋದ್ ಕಾಮತ್ ಮಾತನಾಡಿ, ಹಿರಿಯರು ಮತ್ತು ಯುವಕರನ್ನು ಒಂದೇ ವೇದಿಕೆಗೆ ಕರೆತಂದು ಭೇದಭಾವ ಮರೆಸಿ ಪರಸ್ಪರ ಪ್ರೀತಿ, ಸೌಹಾರ್ದ ಮತ್ತು ಒಗ್ಗಟ್ಟನ್ನು ಬೆಳೆಸುವ ಕಾರ್ಯಕ್ರಮವೇ ಗಣೇಶೋತ್ಸವವಾಗಿದೆ. ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ಆಚರಿಸಿದಾಗ ಮಾತ್ರ ಉತ್ಸವಕ್ಕೆ ನಿಜವಾದ ಅರ್ಥ ದೊರೆಯುತ್ತದೆ ಎಂದರು.

ಗೋಣಿಕೊಪ್ಪ ಅಪರಾಧ ವಿಭಾಗದ ಠಾಣಾಧಿಕಾರಿ ವೆಂಕಟೇಶ್ ಮಾತನಾಡಿ, ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ವಿಶಿಷ್ಟ ಸ್ಥಾನಮಾನವಿದೆ. ಕುಟುಂಬದ ಶಕ್ತಿಯಾಗಿರುವ ಮಹಿಳೆಯರು ಮಕ್ಕಳಿಗೆ ಸಂಸ್ಕೃತಿ, ಪರಂಪರೆ ಮತ್ತು ಧಾರ್ಮಿಕ ಆಚರಣೆಗಳ ಕುರಿತು ತಿಳುವಳಿಕೆ ನೀಡಿದಾಗ ಮಾತ್ರ ನಮ್ಮ ಸಂಪ್ರದಾಯಗಳು ಮುಂದಿನ ಪೀಳಿಗೆಗೂ ಜೀವಂತವಾಗಿ ಸಾಗಲು ಸಾಧ್ಯ ಎಂದರು.

ಪತ್ರಕರ್ತ ಹಾಗೂ ಗಾಯಕ ಚೆನ್ನನಾಯಕ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ದೇಶದ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಚಾರಗಳ ಅರಿವು ಮೂಡಿಸಬೇಕು. ಭಾರತೀಯ ಸಂಸ್ಕೃತಿ, ಆಚಾರ-ವಿಚಾರ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕುಟುಂಬದ ಜವಾಬ್ದಾರಿಯೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಸಮಾಜವನ್ನು ಮತ್ತಷ್ಟು ಸದೃಢಗೊಳಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ದಾನಿಗಳಾದ ಗೀತಾ ನಾಗರಾಜ್, ಪ್ರಸನ್ನ ಯುವಕ ಸಂಘದ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಸ್ವಚ್ಛತಾ ಸಮಿತಿ ಸಂಚಾಲಕ ರಾಘವೇಂದ್ರ ಆರ್., ವೇದಿಕೆ ಸಮಿತಿ ಸಂಚಾಲಕ ಮುಕೇಶ್ ಉಪಸ್ಥಿತರಿದ್ದರು.

ಚೆನ್ನನಾಯಕ ಮತ್ತು ಮುಸ್ತಫಾ ತಂಡದಿAದ ಗಾಯನ ಕಾರ್ಯಕ್ರಮ ನಡೆಯಿತು. ಸ್ಥಳೀಯ ಮಹಿಳೆಯರು ಹಾಗೂ ಮಕ್ಕಳು ವಿವಿಧ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಎಸ್‌ಐ ವೆಂಕಟೇಶ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್. ಪ್ರಕಾಶ್ ೯೦ರ ದಶಕದ ಜನಪ್ರಿಯ ಹಾಡುಗಳನ್ನು ಹಾಡಿ ಮನರಂಜಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕೋಶಾಧಿಕಾರಿ ಅನ್ವಿತಾ, ಉಪಾಧ್ಯಕ್ಷರುಗಳಾದ ಅನಿಲ್, ದಿಲೀಪ್, ಸದಸ್ಯರುಗಳಾದ ಮುರುಳಿ, ಭರತ್, ಕೌಶಿಕ್, ಆಶಾ, ಚಂದ್ರಕಲಾ, ಲೀನಾ ರಾಘವೇಂದ್ರ, ಪ್ರಜ್ವಲ್, ಪುನೀತ್, ಅಜಿತಾ, ಸೌಜನ್ಯ ಸೇರಿದಂತೆ ಹಲವರು ಇದ್ದರು. ಸುಂಟಿಕೊಪ್ಪ: ಸುಂಟಿಕೊಪ್ಪದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ ೨ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಇರಿಸಿ ಹೆಚ್.ಡಿ.ಕೋಟೆಯ ನಗಾರು, ಡಿಜೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಸರ್ಜಿಸಲಾಯಿತು.

ಪಂಪ್ ಹೌಸ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ ೨ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಹೆಚ್.ಡಿ.ಕೋಟೆಯ ನಗಾರು, ಡಿಜೆಯೊಂದಿಗೆ ಪಂಪ್ ಹೌಸ್ ರಸ್ತೆಯಿಂದ ಅಯ್ಯಪ್ಪ ದೇವಾಲಯದವರೆಗೆ ಅಲ್ಲಿಂದ ಮಾದಾಪುರ ರಸ್ತೆಯ ವೃಕ್ಷೋದ್ಭವ ಗಣಪತಿ ದೇವಾಲಯದವರೆಗೆ ಭವ್ಯ ಮೆರವಣೆಗೆ ನಡೆದು ಹರದೂರು ಹೊಳೆಯಲ್ಲಿ ವಿಸರ್ಜಿಸಲಾಯಿತು.

ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಕಾರ್ಯಕ್ರಮವು ಬುಧವಾರ ಅದ್ಧೂರಿಯಾಗಿ ನಡೆಯಿತು.

* ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಂಘದ ೮ನೇ ವರ್ಷದ ಗೌರಿ ಗಣೇಶೋತ್ಸವದ ವಿಸರ್ಜನೋತ್ಸವವು ಬುಧವಾರ ಸಂಜೆ ವಿವಿಧ ಪೂಜಾ ಕೈಂಕರ್ಯದ ನಂತರ ಕೊಡಗರಹಳ್ಳಿ ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪ ಅಲಂಕೃತ ಭವ್ಯ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಭವ್ಯ ಶೋಭಯಾತ್ರೆಯೊಂದಿಗೆ ನಡೆದು ರಾತ್ರಿ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು. ಸುತ್ತಮುತ್ತಲಿನ ನೂರಾರು ಮಂದಿ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.

* ಸೌಹಾರ್ದ ಸಾರಿದ ಮುಸ್ಲಿಂ ಕುಟುಂಬ; ಕೊಡಗರಹಳ್ಳಿಯ ಬೈತೂರಪ್ಪ ದೇವಾಲಯದ ಬಳಿಯ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯ ವೇಳೆ ಸ್ಥಳೀಯ ರಫೀಕ್ ಮತ್ತು ಇಬ್ರಾಹಿಂ ಕುಟುಂಬಸ್ಥರು ಹಿಂದೂಗಳಿಗೆ ಸಿಹಿ ಮತ್ತು ತಂಪು ಪಾನೀಯ ಹಂಚಿ ಸೌಹಾರ್ಧತೆ ಮೆರೆದರು.

* ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಉತ್ಸವ ಮೂರ್ತಿಗೆ ಮಹಾಪೂಜೆ ನೆರವೇರಿಸಿ ನಂತರ ಹರದೂರು ಹೊಳೆಯಲ್ಲಿ ಸಂಜೆ ವಿಸರ್ಜಿಸಲಾಯಿತು.

* ಎಮ್ಮೆಗುಂಡಿಯ ಬಾಲಗಣಪತಿ ಮಿತ್ರ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಎರಡನೇ ವರ್ಷದ ಗೌರಿ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಯು ಎಮ್ಮೆ ಗುಂಡಿಯಿAದ ಸುಂಟಿಕೊಪ್ಪ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ನಂತರ ಹಿಂತಿರುಗಿ ಎಮ್ಮೆ ಗುಂಡಿಯ ಕೆರೆಯಲ್ಲಿ ವಿಸರ್ಜಿಸಲಾಯಿತು. ವೀರಾಜಪೇಟೆ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮದ ತೆರ್ಮೆಮೊಟ್ಟೆಯ ಶ್ರೀ ವಿನಾಯಕ ಸೇವಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ ೨೧ನೇ ವರ್ಷದ ಗೌರಿ ಗಣೇಶೋತ್ಸವವು ಮೂರು ದಿನಗಳ ಕಾಲ ಸಕಲ ಧಾರ್ಮಿಕ ಚಟುವಟಿಕೆಗಳು ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನೆರವೇರಿತು.

ಉತ್ಸವದ ಆರಂಭದ ದಿನದಂದು ಪ್ರಧಾನ ಅರ್ಚಕರಾದ ರಾಧಾಕೃಷ್ಣ ಅವರ ಪೌರೋಹಿತ್ಯದಲ್ಲಿ ಶ್ರೀ ಗಣಪತಿ ಹೋಮ, ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮಹಾಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ಜರುಗಿತು. ಉತ್ಸವದ ಮೂರೂ ದಿನಗಳ ಕಾಲ ವಿಶೇಷ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆದವು. ಆಗಮಿಸಿದ ಭಕ್ತಾದಿಗಳಿಗೆ ಪ್ರತಿದಿನ ವಿಜೃಂಭಣೆಯ ಸಾರ್ವಜನಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಹಬ್ಬದ ಪ್ರಯುಕ್ತ ಊರಿನ ಸಾರ್ವಜನಿಕರು ಹಾಗೂ ಗ್ರಾಮಸ್ಥರಿಗಾಗಿ ವಿವಿಧ ಕ್ರೀಡಾ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ, ರಾತ್ರಿ ಪೂಜೆಯ ನಂತರ ಸಾಂಸ್ಕöÈತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನೆರವೇರಿ ಜನಮನ ಸೆಳೆದವು.

ಮೂರನೇ ದಿನದಂದು ಮಧ್ಯಾಹ್ನ ಮಹಾಪೂಜೆ ಮತ್ತು ಪ್ರಸಾದ ವಿತರಣೆಯ ನಂತರ, ವಿದ್ಯುತ್ ದೀಪಗಳು ಹಾಗೂ ವರ್ಣರಂಜಿತ ವೈವಿಧ್ಯಮಯ ಹೂವುಗಳಿಂದ ಅಲಂಕೃತಗೊAಡ ಮಂಟಪದಲ್ಲಿ ಶ್ರೀ ವಿಘ್ನೇಶ್ವರ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಭವ್ಯ ಮೆರವಣಿಗೆ ನಡೆಸಲಾಯಿತು. ಕೆದಮುಳ್ಳೂರು ಶ್ರೀ ಮಹಾದೇವರಪ್ಪ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ, ವಾದ್ಯಘೋಷಗಳು ಹಾಗೂ ಭಕ್ತರ ಜಯಘೋಷಗಳೊಂದಿಗೆ ಪುತ್ತಮಕ್ಕಿಯ ಕೀರ್ತಿ ಹೊಳೆಯಲ್ಲಿ ಗಣೇಶ ಮೂರ್ತಿಯನ್ನು ಸಕಲ ಗೌರವಗಳೊಂದಿಗೆ ವಿಸರ್ಜಿಸಲಾಯಿತು.

ಶ್ರೀ ವಿನಾಯಕ ಸೇವಾ ಸಂಘದ ಅಧ್ಯಕ್ಷ ಕಿಶೋರ್ ಪೂಜಾರಿ, ಸದಸ್ಯರುಗಳಾದ ಮಂಜೇಶ್ ಎಂ.ವಿ., ಉಮೇಶ್, ಗಗನ್, ಪರಮೇಶ್, ಸತೀಶ್ ಬಿ.ವಿ., ಡಾಲಿ, ಪೂನ್ನಪ್ಪ, ಸುರೇಶ್ ಬಿ.ಕೆ., ಕಿರಣ್ ಬಿ.ಎಂ., ಕಿರಣ್ ಟಿ.ಟಿ., ಮೋಹನ್ ಕುಮಾರ್, ರನ್ನ ಮೇದಪ್ಪ, ಗುರು, ಪರಮೇಶ್, ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಿದರು. *ಗೋಣಿಕೊಪ್ಪ: ಸಂಸ್ಕೃತಿ ಮತ್ತು ಸಂಸ್ಕಾರವನ್ನು ಮರೆಯುತ್ತಿದ್ದೇವೆ ಎಂಬ ಆತಂಕದ ನಡುವೆಯೂ ಗಣೇಶೋತ್ಸವ ಸಮಿತಿಗಳು ನಮ್ಮ ನೆಲದ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಕಾರ್ಯ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ವೀರಾಜಪೇಟೆ ಉಪ ಪೊಲೀಸ್ ಅಧೀಕ್ಷಕ ಮಹೇಶ್ ಕುಮಾರ್ ಅಭಿಪ್ರಾಯಪಟ್ಟರು.

ಗೋಣಿಕೊಪ್ಪ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ ೧೫ನೇ ವರ್ಷದ ಗೌರಿ-ಗಣೇಶೋತ್ಸವದ ನಾಲ್ಕನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಾಗಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗಣೇಶೋತ್ಸವಗಳು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಸಮಾಜದ ಒಗ್ಗಟ್ಟನ್ನು ಬಲಪಡಿಸುವ ವೇದಿಕೆಗಳಾಗುತ್ತಿವೆ. ಇಂತಹ ಸ್ಥಳೀಯ ಸಂಘಟನೆಗಳು ಸಮಾಜದಲ್ಲಿ ಸಂಘಟನಾತ್ಮಕ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಸ್ಥಳೀಯ ಸಾಧಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಮಹೇಶ್‌ಕುಮಾರ್, ತಮ್ಮದೇ ಊರಿನಲ್ಲಿ, ತಮ್ಮ ಜನರ ಮಧ್ಯೆ ಸಾಧಕರನ್ನು ಗುರುತಿಸಿ ಗೌರವಿಸುವುದು ಸಂತಸದ ವಿಚಾರ. ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರ ಸಾಧನೆಗೆ ಪ್ರೋತ್ಸಾಹ ನೀಡುವುದರಜತೆಗೆ, ಮತ್ತೊಬ್ಬ ವಿದ್ಯಾರ್ಥಿಗೆ ಸಾಧನೆ ಮಾಡುವ ಪ್ರೇರಣೆಯನ್ನೂ ನೀಡಿದಂತಾಗುತ್ತದೆ. ಪ್ರಸನ್ನ ಗಣಪತಿ ಸೇವಾ ಸಂಘ ಇಂತಹ ಹೊಸ ಚಿಂತನೆಗಳೊAದಿಗೆ ಕಾರ್ಯಕ್ರಮ ಆಯೋಜಿಸಿರುವುದು ಸಾಮಾಜಿಕವಾಗಿ ಶ್ಲಾಘನೀಯ ಎಂದರು.

ಠಾಣಾಧಿಕಾರಿ ಕಾಳೇಗೌಡ ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಸಂದೇಶವನ್ನು ಸಾರುವ ಸಂಘಟನಾತ್ಮಕ ಮನೋಭಾವ ಪ್ರಸನ್ನ ಯುವಕ ಸಂಘದಲ್ಲಿ ಶಿಸ್ತುಬದ್ಧವಾಗಿ ಕಂಡುಬರುತ್ತಿದೆ. ಸಂಘದ ಕಾರ್ಯವೈಖರಿ ಇತರ ಸಂಘಟನೆಗಳಿಗೂ ಮಾದರಿಯಾಗಿದ್ದು, ಗುಣಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಪೊನ್ನAಪೇಟೆ ತಾಲೂಕು ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ ಬಿ.ಎನ್. ಪ್ರಕಾಶ್ ಮಾತನಾಡಿ, ಉತ್ತಮ ಚಿಂತನೆ ಇದ್ದರೆ ಯಾವುದೇ ಕಾರ್ಯವೂ ಸಕಾರಾತ್ಮಕವಾಗಿ ರೂಪುಗೊಳ್ಳುತ್ತದೆ. ಸಣ್ಣ ವೇದಿಕೆಗಳಿಂದಲೇ ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅನೇಕ ಸಾಧಕರ ಉದಾಹರಣೆಗಳಿವೆ. ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಅಗತ್ಯಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿಯರಾದ ಗಿರಿಜಾ, ರಾಘವೇಂದ್ರ, ಲಕ್ಷಿö್ಮ, ಲೀನಾ ರಾಘವೇಂದ್ರ ಹಾಗೂ ಉಮಾ ಅವರನ್ನು ಸನ್ಮಾನಿಸಲಾಯಿತು. ದೈವಾರಾಧನೆಯಲ್ಲಿ ತೊಡಗಿಸಿಕೊಂಡಿರುವ ಭರತ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಂಜನಾರೈ, ಹತ್ತನೇತರಗತಿಯಲ್ಲಿಉತ್ತೀರ್ಣರಾದ ವಿದ್ಯಾರ್ಥಿ ಚರಣ್ ಸಂಗಪ್ಪ ಅವರನ್ನೂ ಗೌರವಿಸಲಾಯಿತು.

ನಂತರ ಸೈಕ್ಲೋನ್ ನೃತ್ಯ ತಂಡದಿAದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಆಶಾ ಮತ್ತು ಮನೋಜ್ ಅವರು ೯೦ರ ದಶಕದ ಜನಪ್ರಿಯ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ವೇದಿಕೆಯಲ್ಲಿ ಪ್ರಸನ್ನ ಯುವಕ ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್, ಉದ್ಯಮಿಗಳಾದ ಚೆನ್ನರೆಡ್ಡಿ ಮತ್ತು ಶಿವಾರೆಡ್ಡಿ, ವೇದಿಕೆ ಸಮಿತಿ ಸಂಚಾಲಕ ಪ್ರಮೋದ್, ಪೂಜಾ ಸಮಿತಿ ಸಂಚಾಲಕ ಮುರಳೀಶ್, ಸಮಿತಿ ಸಂಚಾಲಕಿ ಸೌಜನ್ಯ, ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕೋಶಾಧಿಕಾರಿ ಅನ್ವಿತಾ, ಉಪಾಧ್ಯಕ್ಷರಾದ ಅನಿಲ್ ಮತ್ತು ದಿಲೀಪ್, ಸದಸ್ಯರಾದ ಕೌಶಿಕ್, ಆಶಾ, ಚಂದ್ರಕಲಾ, ಪ್ರಜ್ವಲ್, ಪುನೀತ್, ಅಜಿತಾ ಸೇರಿದಂತೆ ಹಲವರು ಇದ್ದರು. *ಗೋಣಿಕೊಪ್ಪ: ಐದು ದಿನಗಳ ಕಾಲ ಭಕ್ತಿಯಿಂದ ಪೂಜಿಸಲ್ಪಟ್ಟ ವಿಘ್ನೇಶ್ವರನಿಗೆ ಅಂತಿಮ ಪೂಜೆ ಸಲ್ಲಿಸಿ ವಿಸರ್ಜಿಸಲಾಯಿತು.

ಗೋಣಿಕೊಪ್ಪದ ಗಣೇಶೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಂಟಪಗಳು ಒಂದೇ ದಿನ ಸಾಮೂಹಿಕ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಗಣೇಶ ವಿಸರ್ಜನೆಗೆ ಹೊಸ ಮಾದರಿ ಕಲ್ಪಿಸುವ ಉದ್ದೇಶದಿಂದ ಪತ್ರಕರ್ತ ಜಗದೀಶ್ ಜೋಡುಬೀಟಿ, ಸತೀಶ್ ಸಿಂಗಿ ಹಾಗೂ ಗ್ರಾ.ಪಂ. ಮಾಜಿ ಸದಸ್ಯರಾದ ರಾಜೇಶ್ ಮತ್ತು ಸುರೇಶ್ ರೈ ಪ್ರಯತ್ನದಿಂದ ವಿವಿಧ ಬಡಾವಣೆಗಳ ಗಣೇಶೋತ್ಸವ ಸಮಿತಿಗ¼ ಒಗ್ಗಟ್ಟಿನಿಂದ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡವು.

ಪ್ರಸನ್ನ ಗಣಪತಿ ಸೇವಾ ಸಂಘ, ಭಗತ್‌ಸಿಂಗ್ ಯುವಕ ಸಂಘ, ಉಮಾಮಹೇಶ್ವರಿ ದೇವಸ್ದಾನ, ವಿನಾಯಕ ಭಕ್ತ ಮಂಡಳಿ, ನೇತಾಜಿ ಭಕ್ತ ಮಂಡಳಿ, ವಿವೇಕಾನಂದ ಬಡಾವಣೆ ನಾಗರಿಕ ವೇದಿಕೆ, ಹರಿಶ್ಚಂದ್ರಪುರ, ಇಂಡಿಯನ್ ಯುವಕ ಸಂಘ ಸೀಗೆತೋಡು, ಸಿದ್ದಿ ವಿನಾಯಕ ಯುವಸೇನೆ ಹರಿಚಂದ್ರಪುರ, ವಿನಾಯಕ ಯುವಕ ಸಂಘ ಮೂರನೇ ವಿಭಾಗ ಸೇರಿದಂತೆ ಹತ್ತು ಮಂಟಪಗಳು ಮೆರವಣಿಗೆಯಲ್ಲಿ ಭಾಗವಹಿಸಿದವು. ಸೋಮವಾರಪೇಟೆ: ಕೊಡಗು ಜಿಲ್ಲಾ ಜಾನಪದ ಪರಿಷತ್ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಸ್ವರ್ಣ ಗೌರಿ ಹಬ್ಬದ ಅಂಗವಾಗಿ ಪರಿಷತ್ ಮಹಿಳಾ ಸದಸ್ಯರು ಹಾಗು ಆಹ್ವಾನಿತ ಮಹಿಳೆಯರಿಗೆ ಬಾಗಿನ ವಿತರಣೆ ಕಾರ್ಯಕ್ರಮ ಪಟ್ಟಣದ ಪತ್ರಿಕಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷೆ ವೀಣಾ ಮನೋಹರ್, ಯುವ ಜನಾಂಗ ಸಂಸ್ಕೃತಿಯ ಮಹತ್ವ ಅರಿಯಬೇಕು. ಪಂಚಭೂತಗಳನ್ನು ಪೂಜಿಸಿ ಪೋಷಿಸುವ ಸಂಪ್ರದಾಯ ನಮ್ಮದು. ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಂತೆ ನಡೆದರೆ ನೆಲ ಜಲದ ಉಳಿವು ತನ್ನಿಂತಾನೇ ಆಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬೇಳೂರು ಗ್ರಾಮದ ಕಲಾವಿದೆ, ನಾಟಕ-ಚಲನಚಿತ್ರ ನಿರ್ದೇಶಕಿ, ಸೃಷ್ಟಿ ಕಲಾ ಮಂದಿರದ ಸ್ಥಾಪಕರಾದ ರೂಪಾ ಮೋಹನ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರೂಪಾ ಮೋಹನ್,ಜಾನಪದ ಕಲೆಗಳನ್ನು ಒಬ್ಬರಿಂದ ಮತ್ತೊಬ್ಬರಿಗೆ ತಲುಪಿಸುವ ಕೆಲಸ ಆಗಬೇಕು. ರಂಗಭೂಮಿಯ ಕಲೆಗಳು ಉಳಿಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎ. ಪ್ರಕಾಶ್ ಮಾತನಾಡಿ, ಜಾನಪದ ಸಂಸ್ಕೃತಿ, ಆಚಾರ ವಿಚಾರ, ಪದ್ಧತಿ ಪರಂಪರೆಗಳನ್ನು ಉಳಿಸುವ ಹಾಗೂ ಜಾನಪದ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪರಿಷತ್ ನಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪರಿಷತ್‌ನ ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಎಸ್.ಎ.ಮುರುಳೀಧರ್, ಕನ್ನಡ ಸಿರಿ ಸ್ನೇಹ ಬಳಗದ ತಾಲೂಕು ಅಧ್ಯಕ್ಷ ಹೆಚ್.ಜೆ. ಜವರಪ್ಪ ಅವರುಗಳು ಮಾತನಾಡಿದರು.

ಪರಿಷತ್ ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್, ಕಾರ್ಯದರ್ಶಿ ಎಂ.ಎ. ರುಬೀನಾ, ಉಪಾಧ್ಯಕ್ಷ ನ.ಲ. ವಿಜಯ, ಸಂಧ್ಯಾಕೃಷ್ಣಪ್ಪ, ನಿರ್ದೇಶಕರುಗಳಾದ ಶರ್ಮಿಳಾ, ಆಶಾ, ರಾಣಿ, ದೀಪಿಕಾ, ಅರುಣ, ಜಲಾ ಕಾಳಪ್ಪ, ಸುಮತಿ, ಸುಶೀಲಾ, ರೇಣುಕಾ, ವಾಸಂತಿ, ಕವಿತಾ, ಪ್ರೇಮಾ, ಸರಿತಾ, ಸುದರ್ಶನ್, ಹೇಮಂತ್ ಪಾರೇರಾ, ಲಕ್ಷ್ಮೀಕಾಂತ್ ಸೇರಿದಂತೆ ಇತರರು ಕಾರ್ಯಕ್ರಮ ನಿರ್ವಹಿಸಿದರು. ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದಲ್ಲಿ ಗೌರಿ ಗಣೇಶ ಉತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಗೆ ಪೂಜೆಗಳನ್ನು ನೆರವೇರಿಸಿ ವಿಸರ್ಜನೆ ಮಾಡಲಾಯಿತು.

ಗ್ರಾಮಸ್ಥರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿಗಳು ಭಾಗವಹಿಸಿ ಆಶೀರ್ವಚನ ನೀಡಿ, ಸಾರ್ವಜನಿಕ ಗಣೇಶೋತ್ಸವ ಆಚರಿಸುವುದರಿಂದ ಸಮಾಜದಲ್ಲಿ ಜಾತಿ, ಮತ, ಪಂಗಡ, ಜನಾಂಗ ದೂರವಾಗಿ ಸೌಹಾರ್ದತೆಯಿಂದ ಬದುಕಲು ಪೂರಕವಾಗುತ್ತದೆ ಎಂದರು.

ಉತ್ಸವ ಸಮಿತಿಯ ಅಧ್ಯಕ್ಷ ಕುಪ್ಪನ ಅಯ್ಯಪ್ಪ ಹಾಗೂ ಉಪಾಧ್ಯಕ್ಷ ಬಳುತ್ತಜ್ಜಿ ಚರಣ್, ಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಶ್ರೀ ಚೌಡೇಶ್ವರಿ ದೇವಾಲಯ ಜೀರ್ಣೋದ್ಧಾರ ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷರಾದ ಕುಡೆಕಲ್ ಚಿದಾನಂದ, ಉಪಸ್ಥಿತರಿದ್ದರು.

ಗಣಪತಿ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ಅಲಂಕೃತ ಮಂಟಪದಲ್ಲಿ ಮೆರವಣಿಗೆ ಸಾಗಿ ಗುಡ್ಡೆಹೊಸೂರಿನ ವೃತ್ತದ ಬಳಿಯ ಬಳ್ಳೂರು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸಾಗಿ ಬಂದು ಮೆರವಣಿಗೆಗೆ ರಂಗು ಬಂದಿತು. ದೇವಸ್ಥಾನದಲ್ಲಿ ಉತ್ಸವದ ಮೂರು ದಿನಗಳ ಕಾಲ ಅನ್ನಸಂತರ್ಪಣೆ ಕಾರ್ಯ ನಡೆಯಿತು.

ಪ್ರತಿಷ್ಠಾಪನೆ ಮಾಡಿದ ಸ್ಥಳಕ್ಕೆ ಶಾಸಕರಾದ ಡಾ. ಮಂತರ್ ಗೌಡ, ಉದ್ಯಮಿ ಎಡಿಕೇರಿ ಪ್ರಸನ್ನ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಕಾವೇರಿ ನದಿಯಲ್ಲಿ ಗಣಪತಿ ವಿಸರ್ಜನೆ ಮಾಡಲಾಯಿತು. ವೇದಿಕೆಯಲ್ಲಿ ನಡೆದ ಗ್ರಾಮಸ್ಥರಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಅಧಿಕ ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಕಟ್ರತನ ಮಧುರಾಜ್, ಉದ್ಯಮಿ ದಿನೇಶ್, ಪ್ರಧಾನ ಕಾರ್ಯದರ್ಶಿ ಕಿಶೋರ್, ರಂಜಿತ್, ಕಾರ್ಯದರ್ಶಿ ಮಣವಟ್ಟಿರ ಬಿದ್ದಪ್ಪ, ಸಹ ಕಾರ್ಯದರ್ಶಿ ರಂಜು, ಸಂಘಟನಾ ಕಾರ್ಯದರ್ಶಿ ಮಣವಟ್ಟಿರ ಗಣೇಶ್, ಸಹಖಜಾಂಚಿ ನಾಗಣ್ಣ ರವಿಕುಮಾರ್, ಹಾಗೂ ದೇವಸ್ಥಾನ ಸಮಿತಿಯ ವಿವಿಧ ಪದಾಧಿಕಾರಿಗಳು, ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು. ವೀರಾಜಪೇಟೆ: ಪೊನ್ನಂಪೇಟೆ ತಾಲೂಕಿನ ತಿತಿಮತಿಯ ವಿನಾಯಕ ನಗರದಲ್ಲಿ ಆಯೋಜಿಸಿರುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭಾಗವಹಿಸಿ ಪೂಜೆ ಸಲ್ಲಿಸಿದರು.

ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ನವೀನ್, ವಿಶಾಲ್ ಅಯ್ಯಣ್ಣ, ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಸಂತೋಷ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಂಕಜ, ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿ, ಕಾಫಿ ಬೆಳೆಗಾರ ಚೆಪ್ಪುಡಿರ ಕಾರ್ಯಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಅಪ್ರೋಜ್, ವಿನಾಯಕ ಸೇವಾ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಚೆಟ್ಟಳ್ಳಿ: ಮಾದಾಪುರ ಜಂಬೂರಿನ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಐದನೇ ವರ್ಷದ ಗಣೇಶೋತ್ಸವವನ್ನು ಆಚರಿಸಲಾಯಿತು. ಮಾದಾಪುರ ಹೊಳೆಯಲ್ಲಿ ಗೌರಿ ಗಣೇಶನ ಮೂರ್ತಿಯನ್ನು ವಿಸರ್ಜಿಸಲಾಯಿತು.

ಮಂಡಳಿಯ ಅಧ್ಯಕ್ಷ ಹರೀಶ್ ಪೊನ್ನಂಬಲ, ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಚೇತನ್, ಖಜಾಂಚಿ ಶಶಿಕುಮಾರ್, ಗೌರವಾಧ್ಯಕ್ಷ ಲೋಕೇಶ್ ಗೌರವ ಸಲಹೆಗಾರರಾದ ತಂಬುಕುತ್ತಿರ ಗಪ್ಪು ಸೋಮಯ್ಯ (ಮಾಜಿ ಸೈನಿಕರು) ಜಯಕುಮಾರ್, ಪ್ರಥನ್, ಉಮೇಶ್, ಹರೀಶ್ ಬಾಣೆ, ವಿಜಯ್ ಮತ್ತು ಮಂಡಳಿಯ ಮತ್ತಿತರರು ಇದ್ದರು. ಸುಂಟಿಕೊಪ್ಪ: ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರ