ಮಡಿಕೇರಿ, ಸೆ. ೨೧: ವೀರಾಜಪೇಟೆ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬAಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ತಾ. ೨೫ ರ ಮಧ್ಯಾಹ್ನ ೨ ಗಂಟೆಯಿAದ ತಾ. ೨೬ ರ ಬೆಳಿಗ್ಗೆ ೧೦ ಗಂಟೆವರೆಗೆ ವೀರಾಜಪೇಟೆ ನಗರದಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಮಾರ್ಗ ಬದಲಾವಣೆ ವಿವರ: ಪೆರುಂಬಾಡಿ ಕಡೆಯಿಂದ ವೀರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿAದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್‌ಪೋಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ, ಸಿದ್ದಾಪುರಕ್ಕೆ ಹೋಗುವುದು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ, ಬಿಟ್ಟಂಗಾಲ, ಬಾಳುಗೋಡು, ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು.
ಮಡಿಕೇರಿಯಿಂದ ಕೇರಳದ ಕಡೆಗೆ ಹೋಗುವ ವಾಹನಗಳು ಮೂರ್ನಾಡು, ಕೊಂಡAಗೇರಿ, ಅಮ್ಮತ್ತಿ, ಪಾಲಿಬೆಟ್ಟ, ಕೈಕೇರಿ, ಬಿಟ್ಟಂಗಾಲ, ಬಾಳುಗೋಡು, ಪೆರುಂಬಾಡಿ, ಮಾಕುಟ್ಟ ಮಾರ್ಗವಾಗಿ ಹೋಗುವುದು. ಕೇರಳದ ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಪೆರುಂಬಾಡಿ, ಬಿಟ್ಟಂಗಾಲ ಮಾರ್ಗವಾಗಿ ಕೈಕೇರಿ - ಪಾಲಿಬೆಟ್ಟ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಹೋಗುವುದು. ಮಡಿಕೇರಿ ಕಡೆಯಿಂದ ಗೋಣಿಕೊಪ್ಪ ಮುಖಾಂತರ ಮೈಸೂರು, ಬೆಂಗಳೂರಿಗೆ ಹೋಗುವ ವಾಹನಗಳು ಮೂರ್ನಾಡು, ಕೊಂಡAಗೇರಿ ಅಮ್ಮತ್ತಿ, ಪಾಲಿಬೆಟ್ಟ-ಕೈಕೇರಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರು, ಬೆಂಗಳೂರಿಗೆ ಹೋಗುವುದು. ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವೀರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ವಾಹನ ನಿಲುಗಡೆ ಮಾಡಬೇಕು.
ಗೋಣಿಕೊಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನ ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲ್ಲಿಸತಕ್ಕದ್ದು. ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ವಾಹನ ನಿಲುಗಡೆ ಮಾಡಬೇಕು.
ಮೈಸೂರು, ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ, ಸಿದ್ದಾಪುರ ಮಾರ್ಗವಾಗಿ ಮಡಿಕೇರಿಗೆ ಹೋಗುವುದು, ಒಂಟಿಯAಗಡಿ, ಚೆಂಬೆಬೆಳ್ಳೂರು ಮಾರ್ಗವಾಗಿ ವೀರಾಜಪೇಟೆ ನಗರಕ್ಕೆ ಗಣೇಶ ವಿಸರ್ಜನೆ ಮೆರವಣಿಗೆ ನೋಡಲು ಬರುವ ವಾಹನಗಳು ಕೊಡವ ಸಮಾಜ ಜಂಕ್ಷನ್‌ನಿAದ ಚೆಂಬೆಬೆಳ್ಳೂರಿಗೆ ಹೋಗುವ ರಸ್ತೆಯ ಎಡಭಾಗದಲ್ಲಿ ನಿಲ್ಲಿಸತಕ್ಕದ್ದು. ಮಡಿಕೇರಿ ಕಡೆಯಿಂದ ವೀರಾಜಪೇಟೆ ಗಣೇಶ ವಿಸರ್ಜನೆ ಮೆರವಣಿಗೆ ನೋಡಲು ಬರುವ ವಾಹನಗಳು ಕೊಡವ ಸಮಾಜ ಜಂಕ್ಷನ್‌ನಿAದ ಚೆಂಬೆಬೆಳ್ಳೂರಿಗೆ ಹೋಗುವ ರಸ್ತೆಯ ಎಡಭಾಗದಲ್ಲಿ ನಿಲುಗಡೆ ಮಾಡಬೇಕು.
ತಾ. ೨೫ ರಂದು ಮಧ್ಯಾಹ್ನ ೨ ಗಂಟೆಯಿAದ ತಾ. ೨೬ ರ ಬೆಳಿಗ್ಗೆ ೧೦ ಗಂಟೆಯವರೆಗೆ ವೀರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‌ನಿAದ ದಖ್ಖನಿ ಮೊಹಲ್ಲಾ ಜಂಕ್ಷನ್‌ವರೆಗೆ ಯಾವುದೇ ವಾಹನಗಳು ಓಡಾಡದಂತೆ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಈ ಸಂಚಾರ ನಿಯಮಗಳಿಗೆ ಏನಾದರೂ ವ್ಯತ್ಯಾಸ ಅಥವಾ ಮಾರ್ಪಾಡು ಇದ್ದರೆ ಆಯಾಯ ಸ್ಥಳದಲ್ಲಿ ಇರುವ ಪೊಲೀಸರು ನೀಡುವ ನಿರ್ದೇಶನದಂತೆ ನಡೆದುಕೊಳ್ಳುವುದು. ಇದರೊಂದಿಗೆ ಸನ್ನಿವೇಶಕ್ಕೆ ತಕ್ಕಂತೆ ಅವಶ್ಯಕತೆ ಇದ್ದರೆ, ಸಣ್ಣಪುಟ್ಟ ಮಾರ್ಪಾಡು ಮಾಡಲು ಪೊಲೀಸ್ ಅಧಿಕಾರಿಗಳಿಗೆ ಅನುಮತಿಸಿದೆ.
ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಇವರಿಗೆ ಅಧಿಕಾರ ನೀಡಿದೆ.
ಈ ವಾಹನ ಸಂಚಾರ ನಿಯಮವು ತಾ. ೨೫ ರ ಮಧ್ಯಾಹ್ನ ೨ ಗಂಟೆಯಿAದ ತಾ. ೨೬ ರ ಬೆಳಿಗ್ಗೆ ೧೦ ಗಂಟೆಯವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.