ಬೆಂಗಳೂರು, ಸೆ. ೨೨: ಸೋಮವಾರದಿಂದ ರಾಜ್ಯದ ಉಭಯ ಸದನಗಳಲ್ಲಿ ಕಸ್ತೂರಿರಂಗನ್ ವರದಿ ಜಾರಿ ಕುರಿತು ದೀರ್ಘ ಚರ್ಚೆ ನಡೆದು ಮಾತನಾಡಿದ ಎಲ್ಲ ಶಾಸಕರ ಅಭಿಪ್ರಾಯಗಳನ್ನು ಕೇಳಿದ ಬಳಿಕ ಪಕ್ಷಾತೀತವಾಗಿ ಕಸ್ತೂರಿ ರಂಗನ್ ಪ್ರಸ್ತುತ ವರದಿಯನ್ನು ತಿರಸ್ಕರಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ, ವರದಿಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಲು ಮತ್ತು ರಾಜ್ಯದ ಸ್ಪಷ್ಟ ನಿಲುವನ್ನು ಸವಿವರವಾಗಿ ಸಿದ್ಧಪಡಿಸಲು ಕೇಂದ್ರ ಸರ್ಕಾರಕ್ಕೆ ಕನಿಷ್ಟ ಒಂದು ವರ್ಷದ ಕಾಲಾವಕಾಶ ನೀಡುವಂತೆ ಕೋರಲು ನಿರ್ಣಯಿಸಲಾಗಿದೆ.
ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸರ್ಕಾರದ ಅಧಿಕೃತ ನಿರ್ಣಯವನ್ನು ಓದಿ ಹೇಳಿದರು. ಅಲ್ಲದೆ, ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಅವರು ಪ್ರಸ್ತಾಪಿಸಿದ ಹಸಿರು ಮಂಡಳಿಯ ಮುಂದೆಯೂ ಈ ವರದಿ ಮಂಡಿಸಲ್ಪಟ್ಟಿರುವುದರ ಕುರಿತು ಪ್ರತಿಕ್ರಿಯಿಸಿ ಈ ಹಿನ್ನೆಲೆಯಲ್ಲಿಯೂ ರಾಜ್ಯ ಸರಕಾರವು ಕಾರ್ಯೋನ್ಮುಖವಾಗುವುದೆಂದು ಸದನದಲ್ಲಿ ತಿಳಿಸಿದರು.
ರಾಜ್ಯ ಸರ್ಕಾರವು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಮಿತಿಯಲ್ಲಿ ಕಂದಾಯ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ರೈತ ಸಮುದಾಯದ ಪ್ರತಿನಿಧಿಗಳು, ಕೈಗಾರಿಕಾ ಉದ್ಯಮಗಳ ಪ್ರತಿನಿಧಿಗಳು, ಅರಣ್ಯ ಮತ್ತು ಪರಿಸರಕ್ಕೆ ಸಂಬAಧಿಸಿದ ವಿಷಯಗಳಲ್ಲಿ ಪರಿಣತಿ ಹೊಂದಿರುವ ಶೈಕ್ಷಣಿಕ ಸಂಸ್ಥೆಗಳ ತಜ್ಞರು/ವಿಜ್ಞಾನಿಗಳನ್ನು ಒಳಗೊಳ್ಳಲಿದೆ.
ಈ ಸಮಿತಿ ರಚಿಸಿ, ಕಸ್ತೂರಿರಂಗನ್ ವರದಿಯ ನ್ಯೂನ್ಯತೆಗಳನ್ನು ಸರಿಪಡಿಸಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಭೌತಿಕವಾಗಿ ಸರ್ವೆ ನಂಬರ್ವಾರು ಅಳತೆ ನಿರ್ವಹಿಸಲು ರಾಜ್ಯ ಸರ್ಕಾರದಿಂದ ನಿರ್ಧರಿಸಿದ್ದು, ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಲುವಾಗಿ, ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಒಂದು ವರ್ಷದ ಕಾಲಾವಕಾಶ ನೀಡುವಂತೆ ಮನವಿ ಮಾಡಲಿದೆ. ಕಸ್ತೂರಿ ರಂಗನ್ ವರದಿ ಕರ್ನಾಟಕ ರಾಜ್ಯಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರವು ಈಗ ಅಂತಿಮಗೊಳಿಸಬಾರದು ಎಂದು ಮನವಿ ಮಾಡಲಾಗುವುದು. ಸೂಕ್ಷö್ಮ ಪರಿಸರ ವಲಯ (ಇಎಸ್‌ಎ)ವ್ಯಾಪ್ತಿಯಲ್ಲಿ ಕೇವಲ ಅಧಿಸೂಚಿತ ಅರಣ್ಯ ಪ್ರದೇಶಗಳು, ಇತರ ಅರಣ್ಯ ಪ್ರದೇಶಗಳನ್ನು ಮಾತ್ರ ಸೇರಿಸಬೇಕು. (ಈಗಾಗಲೇ ಮಂಜೂರಾದ ಪ್ರದೇಶ ಹೊರತುಪಡಿಸಿ) ಕೃಷಿ ಭೂಮಿ, ತೋಟಗಾರಿಕೆ/ಪ್ಲಾಂಟೇಶನ್ ಪ್ರದೇಶಗಳು, ಜನವಸತಿ ಮತ್ತು ಸಾರ್ವಜನಿಕ ಚಟುವಟಿಕೆ ಪ್ರದೇಶಗಳನ್ನು ಸೇರಿಸಬಾರದು. ರಾಜ್ಯ ಸರ್ಕಾರವು ತನ್ನ ವರದಿಯನ್ನು ಸಲ್ಲಿಸಿದ ನಂತರ ಭಾರತ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಈ ವಿಷಯದ ಕುರಿತು ವಿವರವಾದ ಚರ್ಚೆ ನಡೆಸಿ, ನಂತರವೇ ಈ ವಿಷಯದಲ್ಲಿ ಅಂತಿಮ ನಿರ್ಧಾರವನ್ನು ಕೈಗೊಳ್ಳಬೇಕು. ರಾಜ್ಯ ಮಟ್ಟದ ಸಮಿತಿಗೆ ಸಹಾಯಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಜನಪ್ರತಿನಿಧಿಗಳನ್ನೊಳಗೊಂಡ ಸಮಿತಿಗಳನ್ನು ಸಹ ರಚಿಸಲು ನಿರ್ಧರಿಸಿದೆ.
ಅವೈಜ್ಞಾನಿಕ
ಕೇಂದ್ರ ಸರ್ಕಾರವು ೨೦೨೬ ರ ಜುಲೈ ೨೭ರಂದು ಹೊರಡಿಸಿದ ೭ನೇ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರವು ಯಥಾವತ್ತಾಗಿ ಒಪ್ಪಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿದೆ. ಕೇವಲ ಐದನೇ ಒಂದು ಭಾಗ ಅರಣ್ಯ ಪ್ರದೇಶವನ್ನು ಹೊಂದಿದೆ ಎಂಬ ಕಾರಣಕ್ಕೆ ಇಡೀ ಗ್ರಾಮವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವುದು ಅವೈಜ್ಞಾನಿಕ ಎಂದು ಸದನದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಜನವಸತಿ ಮತ್ತು ಕೃಷಿ ಭೂಮಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯಿಂದ ಸಂಪೂರ್ಣವಾಗಿ ಹೊರಗಿಡಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ. ಜನರ ವಾಸಸ್ಥಳಗಳು (ಜನವಸತಿ ಪ್ರದೇಶಗಳು).ರೈತರ ಕೃಷಿ ಭೂಮಿಗಳು ಮತ್ತು ತೋಟಗಾರಿಕಾ ಜಮೀನುಗಳು, ಈಗಾಗಲೇ ಅನುಮೋದನೆ ಪಡೆದ ಅಭಿವೃದ್ಧಿ ಪ್ರದೇಶಗಳನ್ನು ಕೈ ಬಿಡುವಂತೆ ಆಗ್ರಹಿಸಲಾಗಿದೆ. ಉಪಗ್ರಹ ಆಧಾರಿತ ವರದಿಗಳ ಬದಲಿಗೆ, ಕೇರಳ ಮಾದರಿಯಲ್ಲಿ ಪಶ್ಚಿಮ ಘಟ್ಟದ ಪೀಡಿತ ಪ್ರದೇಶಗಳಲ್ಲಿ ಭೌತಿಕ ಸಮೀಕ್ಷೆ ನಡೆಸಿ ಪ್ರತ್ಯೇಕ ಸರ್ವೆ ನಂಬರ್ಗಳನ್ನು ಗುರುತಿಸಲು ನಿರ್ಧರಿಸಲಾಗಿದೆ. ಕಸ್ತೂರಿರಂಗನ್ ವರದಿಯ ಪ್ರಕಾರ ಕರ್ನಾಟಕದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ- ಈ ೧೦ ಜಿಲ್ಲೆಗಳ ೩೩ ತಾಲೂಕುಗಳ ಒಟ್ಟು ೧,೪೪೯ ಗ್ರಾಮಗಳ ೨೦,೬೬೮ ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷö್ಮ ವಲಯಕ್ಕೆ ಒಳಪಡಿಸಲು ಕೇಂದ್ರ ಉದ್ದೇಶಿಸಿದೆ. ಇದು ಅಲ್ಲಿನ ಸ್ಥಳೀಯ ನಿವಾಸಿಗಳ ಹಾಗೂ ರೈತರ ಜೀವನೋಪಾಯಕ್ಕೆ ಆತಂಕ ತಂದೊಡ್ಡಿರುವುದರಿAದ ಆಡಳಿತ ಮತ್ತು ಪ್ರತಿಪಕ್ಷಗಳೆರಡೂ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಒಟ್ಟಾಗಿ ಈ ನಿರ್ಣಯವನ್ನು ಕೈಗೊಂಡಿವೆ. ಕೃಷಿ ಜಮೀನು, ತೋಟಗಳು, ಮನೆಗಳು ಮತ್ತು ಸಾರ್ವಜನಿಕ ಸೌಲಭ್ಯಗಳನ್ನು ಇಎಸ್‌ಎ ಅಡಿಯಲ್ಲಿ ಸೇರಿಸಲಾಗಿರುವುದರಿಂದ, ಮನೆ ನಿರ್ಮಾಣ, ಕುಟುಂಬದ ಆಸ್ತಿ ವಿಭಜನೆ ಮತ್ತು ವಾರಸುದಾರಿಕೆಗೆ ಸಂಬAಧಪಟ್ಟAತೆ ಸಮಸ್ಯೆಗಳು ಉದ್ಭವವಾಗುತ್ತವೆ ಎಂದು ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ಉಪಗ್ರಹ ದತ್ತಾಂಶ ಆಧಾರಿತ
ಕರಡು ಅಧಿಸೂಚನೆಯು ಉಪಗ್ರಹ ದತ್ತಾಂಶವನ್ನು ಆಧಾರಿತವಾಗಿದ್ದು, ನಿಖರ ಗಡಿ, ಸರ್ವೇ ನಂಬರ್ ಆಧಾರಿತವಾಗಿರುವುದಿಲ್ಲ. ಜನರಿಗೆ ಪರ್ಯಾಯ ಜೀವನೋಪಾಯಕ್ಕೆ ವಿಶೇಷ ಆರ್ಥಿಕ ನೆರವು ನೀಡಲು ಯಾವುದೇ ಪ್ರಸ್ತಾಪ ಇರುವುದಿಲ್ಲ. ಬಗರ್ ಹುಕುಂ, ಅರಣ್ಯ ಹಕ್ಕು, ಡೀಮ್ಸ್ ಫಾರೆಸ್ಟ್, ಭೂ ಮಂಜೂರಾತಿ, ಮೇಲ್ಮನವಿ ಮತ್ತು ನ್ಯಾಯಾಂಗ ಪ್ರಕರಣಗಳಂತಹ ವಿಷಯಗಳನ್ನು ಪರಿಗಣಿಸಿರುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.
ಬಗರ್ ಹುಕುಂ, ಅರಣ್ಯ ಹಕ್ಕು, ಡೀಮ್ಸ್ ಫಾರೆಸ್ಟ್, ಭೂ ಮಂಜೂರಾತಿ, ಮೇಲ್ಮನವಿ ಮತ್ತು ನ್ಯಾಯಾಂಗ ಪ್ರಕರಣಗಳನ್ನು ಪರಿಗಣಿಸಬೇಕು. ತಜ್ಞ ಸಮಿತಿಯಿಂದ ಭೌತಿಕವಾಗಿ ಅರಣ್ಯಗಡಿ, ಜನವಸತಿ, ಪರಿಸರ ಸೂಕ್ಷ್ಮ ಪ್ರದೇಶಗಳನ್ನು, ಜನವಸತಿ ಕೃಷಿ ಚಟುವಟಿಕೆ ಪ್ರದೇಶಗಳನ್ನು ಸರ್ವೆ ನಂಬರ್ವಾರು ಅಳತೆ ಮಾಡಿ ಪ್ರತ್ಯೇಕವಾಗಿ ಗುರುತಿಸಬೇಕು. ಇಎಸ್ ಎ ನಿಂದಾಗಿ ರೈತರ ಹಾಗೂ ಕಾರ್ಮಿಕರ ಪರ್ಯಾಯ ಜೀವನೋಪಾಯ ಮತ್ತು ಆರ್ಥಿಕ ನೆರವನ್ನು ನೀಡಲು ಸೂಕ್ತ ಮಾರ್ಗಸೂಚಿ ರೂಪಿಸಬೇಕು ಎಂದು ಒತ್ತಾಯಿಸಲಾಗಿದೆ.