ಮಡಿಕೇರಿ, ಸೆ. ೨೨: ಗುತ್ತಿಗೆದಾರರಿಗೆ ತುಂಡು ಗುತ್ತಿಗೆ ಹಾಗೂ ಇತರ ಟೆಂಡರ್ ಕಾಮಗಾರಿಗಳಲ್ಲಿ ಕಚೇರಿ ಕೆಲಸ ಕಾರ್ಯಗಳಲ್ಲಿ ವಿಳಂಬ ಹಾಗೂ ಕಾಮಗಾರಿ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿರುವದನ್ನು ಖಂಡಿಸಿ ಮಡಿಕೇರಿ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ವತಿಯಿಂದ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಿಲ್ ಪಾವತಿಯಾಗುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಸಂಘಗಳ ಪದಾಧಿಕಾರಿಗಳು, ಸದಸ್ಯರುಗಳು ಪಾಲ್ಗೊಂಡಿದ್ದರು.