ಕುಶಾಲನಗರ, ಸೆ. ೨೨: ಪಟ್ಟಣದ ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಮಹಾತ್ಮ ಗಾಂಧಿ ಪದವಿ ಕಾಲೇಜು ಆಶ್ರಯದಲ್ಲಿ ಕಲಾಸಂಗಮ ೨೦೨೬ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳ ತಂಡ ದೇಶಭಕ್ತಿ, ದೇಶದ ಭಾವೈಕ್ಯತೆ, ಕಲೆ, ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ಅದ್ಭುತ ಹಾಡುಗಳಿಗೆ ನೃತ್ಯ ಪ್ರದರ್ಶಿಸುವ ಮೂಲಕ ಪ್ರೇಕ್ಷಕರ ಮನಸೂರೆಗೊಳಿಸಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲರವ ಮೈನವಿರೇಳಿಸಿತು.

ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ನೃತ್ಯ, ಸಂಗೀತ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗದ ಸ್ಥಾನಕ್ಕೆ ಏರಬಹುದು. ಸತತ ಪ್ರಯತ್ನ, ಸಮಯ ಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಖಂಡಿತ ಯಶಸ್ಸು ತಮ್ಮ ಪಾಲಾಗುತ್ತದೆ ಎಂದರು.

ವಿವೇಕಾನAದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು, ಶೈಕ್ಷಣಿಕ ಸಾಧನೆಯೊಂದಿಗೆ ಇತರೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಏನಾದರೂ ಸಾಧಿಸುವ ಛಲ ಹೊಂದಬೇಕು. ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವಿವೇಕಾನAದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕ್ಲಾರ ರೇಷ್ಮ, ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತಾ, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಪಾಲ್ಗೊಂಡಿದ್ದರು.

ಇದೇ ಸಂದರ್ಭ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ಕಲಾಸಂಗಮದ ಅಂಗವಾಗಿ ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು.