ಕೂಡಿಗೆ, ಸೆ.೨೨: ಶಿರಂಗಾಲ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಶಿರಂಗಾಲ ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಶ್ರಮಿಸಿದ್ದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎಸ್.ವಿ.ನಂಜುAಡಪ್ಪ (೯೪) ಅವರು ತಾ. ೨೧ ರಂದು ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ನಿಧನರಾದರು.

ಮೃತರ ನಿಧನಕ್ಕೆ ವೀರಶೈವ ಸಮಾಜ, ಶಿರಂಗಾಲ ಶ್ರೀ ಮಂಟಿಗಮ್ಮ ದೇವಸ್ಥಾನ ಸಮಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ ಸೇರಿದಂತೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಮೃತರ ಅಂತಿಮ ದರ್ಶನ ಪಡೆದರು.