ಗೋಣಿಕೊಪ್ಪಲು, ಸೆ. ೨೩: ಮಹಿಳೆಯರಿಗೆ ರಾಜಕೀಯವಾಗಿ ಸ್ಥಳೀಯ ಮಟ್ಟದಲ್ಲಿ ಶೇ. ೫೦ ರಾಜ್ಯಮಟ್ಟದಲ್ಲಿ ಶೇ. ೩೩ ಮೀಸಲಾತಿ ಇರುವುದರಿಂದ ಬಹುದೊಡ್ಡ ಜವಾಬ್ದಾರಿಗಳು ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಒದಗಿ ಬರಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗ್ರಾಮ ಮಟ್ಟದಿಂದ ಗಟ್ಟಿಯಾಗಿಸುವಂತೆ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಮಹಿಳೆಯರಿಗೆ ಕಿವಿಮಾತು ಹೇಳಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ವತಿಯಿಂದ ಪೊನ್ನಂಪೇಟೆಯ ಭಗವತಿ ಸಭಾಂಗಣದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ಪ್ರಮುಖರಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಪೊನ್ನಣ್ಣ, ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳಲ್ಲಿ ಮಹಿಳಾ ಕಾಂಗ್ರೆಸ್ ಸಂಘಟನೆ ಹಾಗೂ ಬಲವರ್ಧನೆ ಅತಿಮುಖ್ಯವಾಗಿದೆ.

ದಿ. ಇಂದಿರಾಗಾAಧಿಯವರು ಪಕ್ಷವನ್ನು ಮುನ್ನಡೆಸಿದ್ದಾರೆ. ಇಂತವರಿAದ ನಾವುಗಳು ಸ್ಪೂರ್ತಿ ಪಡೆಯುವಂತಾಗಬೇಕು. ಪಕ್ಷ ನೀಡಿದ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಬೇಕು. ಪಕ್ಷಕ್ಕಾಗಿ ದುಡಿದವರನ್ನು ಪಕ್ಷ ಗುರುತಿಸಲಿದೆ ಎಂದರು.

ಪೊನ್ನAಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೂಕಳೇರ ಆಶಾ ಪೂಣಚ್ಚ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಮಹಿಳಾ ಕಾಂಗ್ರೆಸ್ ಸಂಘಟಿತವಾದಲ್ಲಿ ಪಕ್ಷದ ಬಹುತೇಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತ, ರಾಜ್ಯ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೊಕ್ಕಂಡ ರೂಪ ಭೀಮಯ್ಯ, ಜಿಲ್ಲಾ ಉಪಾಧ್ಯಕ್ಷರಾದ ನೂರೆರ ಧನ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಕೋಳೆರ ಭಾರತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಿ.ಆರ್. ಪಂಕಜ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ಮೂಕಳೇರ ಸುಮಿತಾ ಗಣೇಶ್, ಕರ್ತಮಾಡ ರಮ್ಯ, ಕಲ್ಪನ, ಶ್ಯಾಮಲ, ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಜಿ ಅಚ್ಚುತ್ತನ್ ಸ್ವಾಗತಿಸಿ, ಶ್ಯಾಮಲ ಪ್ರಾರ್ಥಿಸಿ, ಗಾಯನ, ಪುನಿತ್ ನಿರೂಪಿಸಿ, ಕಲ್ಪನ ವಂದಿಸಿದರು. ಮಹಿಳಾ ಕಾಂಗ್ರೆಸ್ ವತಿಯಿಂದ ಶಾಸಕ ಪೊನ್ನಣ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.