ಮಡಿಕೇರಿ, ಸೆ. ೨೩ ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಿತು.

ಜ. ತಿಮ್ಮಯ್ಯ ಕ್ರಿಡಾಂಗಣದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಥ್ಲೆಟಿಕ್ ತರಬೇತುದಾರರುಗಳಾದ ಅಂತೋಣಿ ಡಿಸೋಜ, ಕೆ.ಮಹಾಬಲ, ಮಂಜುನಾಥ್, ಹಾಕಿ ತರಬೇತುದಾರರು ಗಳಾದ ವೆಂಕಟೇಶ್, ಸುಬ್ಬಯ್ಯ, ಬಿಂದಿಯ, ದಿನಮಣಿ ಇದ್ದರು. ತಾಲೂಕು ಮಟ್ಟದಲ್ಲಿ ವಿಜೇತರಾದ ಗುಂಪು ಕ್ರೀಡಾ ತಂಡಗಳು ಹಾಗೂ ಅಥ್ಲೆಟಿಕ್ಸ್ನಲ್ಲಿ ಪ್ರಥಮ, ದ್ವಿತೀಯ ಸ್ಥಾನ ಗಳಿಸಿದ ಕ್ರೀಡಾಪಟುಗಳು ತಾ.೨೪ರಂದು ಕೂಡಿಗೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ.