ವೀರಾಜಪೇಟೆ, ಸೆ. ೨೩: ಕೊಡಗು ಜಿಲ್ಲಾ ಪಂಚಾಯತ್, ವೀರಾಜಪೇಟೆ ಪುರಸಭೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವೀರಾಜಪೇಟೆ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.

ವೀರಾಜಪೇಟೆ ಪುರಸಭೆ ಕಛೇರಿ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ವೀರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ ಅವರು, ಸಮಗ್ರ ಮತದಾರರ ಪಟ್ಟಿಯನ್ನು ನಿಖರವಾಗಿ ಪರಿಷ್ಕರಿಸುವ ಉದ್ದೇಶದಿಂದ ಪಟ್ಟಣ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ಎಂದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಯಾನಂದ್ ಅವರು ಮಾತನಾಡಿ, ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಡಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿನ ತಮ್ಮ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ಜಾಗೃತಿ ಜಾಥಾದಲ್ಲಿ ಕಾಲೇಜಿನ ಸಿಬ್ಬಂದಿ, ಪುರಸಭೆಯ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.