ಮಡಿಕೇರಿ, ಸೆ. ೨೩: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.೩.೫೦ ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು.

ಆಯ್ಕೆ ಮಾಡುವಾಗ ಮಹಿಳೆಯರಿಗೆ ೩೩%, ವಿಕಲಚೇತನರಿಗೆ ೫% ಹಾಗೂ ತೃತೀಯ ಲಿಂಗಿಗಳಿಗೆ ೧% ಮೀಸಲಾತಿ ಇರಿಸಿದೆ.

ರಾಜ್ಯ ಸರ್ಕಾರದ/ನಿಗಮದ ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ನವೀಕರಣ), ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆ. (ಟ್ರ‍್ಯಾಕ್ಟರ್/ಟ್ಯಾಕ್ಸಿ) ಹಾಗೂ ಹೊಲಿಗೆ ಯಂತ್ರ/ಜಿಗ್‌ಜ್ಯಾಗ್ ಯೋಜನೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು)

ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ ೦೮೦-೨೨೩೭೪೮೪೮/೭೮೯೯೮೯೯೦೩೯ಯಿಂದ ಪಡೆಯಬಹುದಾಗಿದೆ. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಬಹುದಾಗಿದೆ.“೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನಲ್ಲಿ ಯೋಜನೆಗೆ ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ”. ಸೇವಾಸಿಂಧು ತಂತ್ರಾAಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.