ಸೋಮವಾರಪೇಟೆ, ಸೆ. ೨೩: ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಪಟ್ಟಣ ಸಮೀಪದ ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಜವಾಬ್ದಾರಿ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಇನ್ನರ್ ವೀಲ್ನ ಅಧ್ಯಕ್ಷೆ ಎ. ಲತಾ ಮಂಜು ಮಾತನಾಡಿ, ಕ್ಲಬ್ನಿಂದ ಪ್ರಸಕ್ತ ವರ್ಷ ಶಾಲೆ ಮತ್ತು ಸಮುದಾಯಗಳಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಮತ್ತು ಮಕ್ಕಳ ಆರೋಗ್ಯ, ಅಭಿವೃಧಿ ಮತ್ತು ಸುರಕ್ಷತೆ ಕುರಿತು ಕೆಲಸಗಳನ್ನು ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದರು.
ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಚಟುವಟಿಕೆ ಆಧರಿತವಾಗಿ ನಾವು ಪ್ರತಿಷ್ಠಾನ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕಿ ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಸುಮನ ನಿರ್ವಹಿಸಿದರು. ಮಕ್ಕಳ ಬದುಕು, ರಕ್ಷಣೆ, ಅಭಿವೃಧ್ದಿ ಹಾಗೂ ಭಾಗವಹಿಸುವಿಕೆಯ ಕುರಿತು ಉದಾಹರಣೆ ಸಹಿತ ಮಕ್ಕಳಲ್ಲಿ ಅರಿವು ಮೂಡಿಸಿದರು. ಮಕ್ಕಳ ಹಕ್ಕುಗಳು ಎಷ್ಟು ಮುಖ್ಯವೋ ಮಕ್ಕಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸುವುದೂ ಅಷ್ಟೇ ಮುಖ್ಯ ಎಂದು ತಿಳಿ ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ ಕಾರ್ಮಿಕರಾಗುವ ಸಾಧ್ಯತೆಗಳಿವೆ ಎಂದ ಅವರು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ ಗರ್ಭಿಣಿ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಮಕ್ಕಳ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಗಳು ಮತ್ತು ಸೌಲಭ್ಯಗಳ ಕುರಿತು ಮಕ್ಕಳಿಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಇನ್ನರ್ ವೀಲ್ ಉಪಾಧ್ಯಕ್ಷೆ ಅಮೃತ, ಕಾರ್ಯದರ್ಶಿ ವನೀತಾ, ಪದಾಧಿಕಾರಿಗಳಾದ ರಾಜೇಶ್ವರಿ, ದಿವ್ಯ, ಕಾವೇರಿ, ಶಾಲೆಯ ಶಿಕ್ಷಕರು ಇದ್ದರು.