ಮಡಿಕೇರಿ, ಸೆ. ೨೩: ಶಾಲಾ ಬಸ್‌ವೊಂದು ಕಾಟಕೇರಿ-ಅಪ್ಪಂಗಳ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಬುಧವಾರ ಸಂಭವಿಸಿದೆ.
ಮದೆನಾಡುವಿನ ಬಿಜಿಎಸ್ ಶಾಲೆಯಿಂದ ವಿದ್ಯಾರ್ಥಿಗಳು ಕೊಂಡೊಯ್ಯುತ್ತಿದ್ದ ಸಂದರ್ಭ ತಿರುವಿನಲ್ಲಿ ಬೈಕ್‌ವೊಂದು ಬಂದಿದ್ದು, ಅದನ್ನು ತಪ್ಪಿಸುವ ಸಂದರ್ಭ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಪಲ್ಟಿಯಾದ ಹಿನ್ನೆಲೆ ೪ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ೫-೬ ವಿದ್ಯಾರ್ಥಿಗಳಿಗೆ ಪೆಟ್ಟಾಗಿದೆ. ತಕ್ಷಣ ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.