ಮಡಿಕೇರಿ, ಸೆ. ೨೪: ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಮತ್ತು ಎಸ್.ಐ. ಮುನೀರ್ ಅಹ್ಮದ್, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಮತ್ತು ಜಿಲ್ಲಾ ಕಾಂಗ್ರೆಸ್ ಸದಸ್ಯ ಚೊಟ್ಟೆಯಂಡಮಾಡ ವಿಶು ಅವರುಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ನೂತನವಾಗಿ ನಿರ್ಮಾಣವಾಗುತ್ತಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಧನ ಸಹಾಯ ಮಾಡುವಂತೆ ಕೋರಲಾಯಿತು.

ಈ ಸಂದರ್ಭ ಮುಖ್ಯಮಂತ್ರಿಗಳು, ನಿಯೋಗದೊಂದಿಗೆ ಮಾತನಾಡಿ, ನೂತನ ಭವನದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವುದರೊಂದಿಗೆ ಧನ ಸಹಾಯ ಮಾಡುವುದಾಗಿ ಭರವಸೆ ನೀಡಿದರು.