ಕೂಡಿಗೆ, ಸೆ. ೨೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ ಕ್ರೀಡಾ ಶಾಲಾ ಮೈದಾನ ಹಾಗೂ ಸೈನಿಕ ಶಾಲಾ ಕ್ರೀಡಾಂಗಣದಲ್ಲಿ ಆರಂಭಗೊAಡಿತು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯ ಚಕ್ರವರ್ತಿ ಅವರು ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ದಸರಾ ತನ್ನ ಗತವೈಭವ ಹಾಗೂ ಸಾಂಸ್ಕೃತಿಕ ಪರಂಪರೆಯೊAದಿಗೆ ಕ್ರೀಡಾ ಕ್ಷೇತ್ರಕ್ಕೂ ವಿಶೇಷ ಮೆರುಗು ನೀಡಿದೆ. ದಸರಾ ಕ್ರೀಡಾಕೂಟದ ಮೂಲಕ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ದೊರೆಯುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡುವುದರಿಂದ ಉದ್ಯೋಗ ಸೇರಿದಂತೆ ಹಲವು ಅವಕಾಶಗಳು ಲಭ್ಯವಾಗಲಿದ್ದು, ಕ್ರೀಡಾಪಟುಗಳು ಇಂತಹ ಕ್ರೀಡಾಕೂಟಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವ ಎಸ್. ಪಲ್ಲೇದ್ ಮಾತನಾಡಿ, ಯಾವುದೇ ಗುರಿ ಸಾಧನೆಗೆ ಸತತ ಪ್ರಯತ್ನ ಹಾಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯ. ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಕ್ರೀಡಾಪಟುಗಳಲ್ಲಿ ಆತ್ಮವಿಶ್ವಾಸ, ಸಂಘಟನಾ ಮನೋಭಾವ ಹಾಗೂ ಸ್ಪೂರ್ತಿ ಬೆಳೆಯುತ್ತದೆ. ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಿ, ನಿರಂತರ ಪ್ರಯತ್ನದೊಂದಿಗೆ ಮುನ್ನಡೆಯುವುದು ಕ್ರೀಡಾಪಟುಗಳ ಗುರಿಯಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ರೀಡಾ ತರಬೇತು ದಾರರಾದ ಅಂತೋಣಿ ಡಿಸೋಜ, ರಮೇಶ್, ವೆಂಕಟೇಶ್, ಮಂಜುನಾಥ, ಸುರೇಶ್, ಸುಬ್ಬಯ್ಯ, ರಾಷ್ಟಿçÃಯ ಹಾಕಿಪಟು ಪೂರ್ಣೇಶ್, ಬಿಂದ್ಯಾ, ದೀನಾಮಣಿ ವಸತಿ ಗೃಹದ ಮೇಲ್ವಿಚಾರಕಿ ಸವಿತಾ ಸೇರಿದಂತೆ ವಿವಿಧ ಕ್ರೀಡಾ ವಿಭಾಗಗಳ ತರಬೇತುದಾರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಅಂತೋಣಿ ಡಿಸೋಜಾ ಸ್ವಾಗತಿಸಿದರು. ರಮೇಶ್ ವಂದಿಸಿದರು.