ಪೊನ್ನಂಪೇಟೆ, ಸೆ. ೨೪: ಗೋಣಿಕೊಪ್ಪಲಿನ ಕಾವೇರಿ ಎಜುಕೇಷನ್ ಸೊಸೈಟಿಯ ೫೮ನೇ ವಾರ್ಷಿಕ ಮಹಾಸಭೆ ಹಾಗೂ ವಿಶೇಷ ಮಹಾಸಭೆ ತಾ. ೩೦ ರಂದು ನಡೆಯಲಿದೆ.
ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಸಭೆ ನಡೆಯಲಿದ್ದು, ಬೆಳಿಗ್ಗೆ ೧೦.೩೦ಕ್ಕೆ ವಿಶೇಷ ಮಹಾಸಭೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ನಡೆಯಲಿದೆ. ೧೯೬೮ರಲ್ಲಿ ನೋಂದಾಯಿತಗೊAಡಿರುವ ಕಾವೇರಿ ಎಜುಕೇಷನ್ ಸೊಸೈಟಿಯು ಕೊಡಗಿನ ಪ್ರಮುಖ ಶೈಕ್ಷಣಿಕ ಸಂಸ್ಥೆಯಾಗಿದ್ದು, ಸೊಸೈಟಿ ಅಧ್ಯಕ್ಷ ಎಂ.ಎಸ್. ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ, ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಕೆ.ಪಿ. ಬೋಪಣ್ಣ ತಿಳಿಸಿದ್ದಾರೆ.