ಕುಶಾಲನಗರ, ಸೆ. ೨೪: ಕೊಡಗು ಜಿಲ್ಲಾ ಪಂಚಾಯಿತಿ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಕಬಡ್ಡಿ ಚಾಂಪಿಯನ್ಶಿಪ್- ೨೦೨೬ನೇ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ರಾಷ್ಟಿçÃಯ ಕ್ರೀಡಾ ತರಬೇತುದಾರ ಉತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿ ಗಳು ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡದೆ ಸಾಮರಸ್ಯ ದಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜು ಮಾತನಾಡಿ, ಕ್ರೀಡಾಪಟುಗಳು ಹುಮ್ಮಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.
ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಬಿ. ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶನಿವಾರಸಂತೆ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್, ಕನ್ನಡ ಭಾರತಿ ಪಿಯು ಕಾಲೇಜು ಪ್ರಾಂಶುಪಾಲ ಡಾ. ನಾಗೇಂದ್ರ ಸ್ವಾಮಿ, ಪದವಿ ಕಾಲೇಜು ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ತಾಲೂಕು ವ್ಯಾಪ್ತಿಯ ವಿವಿಧ ಪಿಯು ಕಾಲೇಜುಗಳ ೬ ಬಾಲಕರ ಹಾಗೂ ೫ ಬಾಲಕಿಯರ ತಂಡಗಳು ಸೇರಿದಂತೆ ಒಟ್ಟು ೧೧ ಕಬಡ್ಡಿ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ತೀರ್ಪುಗಾರರಾಗಿ ಪ್ರವೀಣ್, ಆದರ್ಶ ಕಾರ್ಯನಿರ್ವಹಿಸಿದರು.