ವೀರಾಜಪೇಟೆ, ಸೆ. ೨೪: ಮದುವೆ ಸಮಾರಂಭಕ್ಕೆ ಆಗಮಿಸಿ ಕಲ್ಯಾಣ ಮಂಟಪದ ಬಳಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ವೀರಾಜಪೇಟೆ ಗ್ರಾಮಾಂತರ ಪೊಲೀಸರು ಬಂಧಿಸಿ, ಕಳವು ಮಾಡಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡAಗಾಲ ಗ್ರಾಮದ ನಿವಾಸಿ ಎನ್.ಬಿ. ಭೀಮಯ್ಯ ಅಲಿಯಾಸ್ ಚಿಂಡ (೪೨) ಬಂಧಿತ ಆರೋಪಿ.
ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ನಿವಾಸಿ ಶಾಂತಿ ಹಾಗೂ ಅವರ ಪುತ್ರ ಅಭಿಷೇಕ್ ಅವರು ಕೆಎ-೧೨ ಯು-೫೨೭೬ ನೋಂದಣಿ ಸಂಖ್ಯೆಯ ಹೋಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನದಲ್ಲಿ ತಾ.೨೦ರಂದು ಗೋಣಿಕೊಪ್ಪದ ಸವಿತಾ ಸಮಾಜದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು.
ಮದುವೆ ಮುಗಿದ ಬಳಿಕ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ನಡೆಯುತ್ತಿದ್ದ ಮತ್ತೊಂದು ಮದುವೆ ಸಮಾರಂಭಕ್ಕೆ ತೆರಳಿದ್ದರು. ಕಲ್ಯಾಣ ಮಂಟಪದ ಬಳಿ ದ್ವಿಚಕ್ರ ವಾಹನವನ್ನು ನಿಲುಗಡೆ ಮಾಡಿ ಭೋಜನಕ್ಕೆ ತೆರಳಿದ್ದರು. ಭೋಜನ ಮುಗಿಸಿ ವಾಪಸ್ ಬಂದಾಗ ವಾಹನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಸAಜೆಯವರೆಗೂ ಸುತ್ತಮುತ್ತ ಹುಡುಕಾಟ ನಡೆಸಿದರೂ ವಾಹನ ಪತ್ತೆಯಾಗದ ಹಿನ್ನೆಲೆಯಲ್ಲಿ, ವಾಹನದ ಮಾಲೀಕರು ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನದ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ವಾಹನ ಕಳವು ಮಾಡಿರುವುದು ಬೆಳಕಿಗೆ ಬಂದಿದ್ದು, ಆತನಿಂದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ ವಾಹನ ಕಳ್ಳತನ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನಿರ್ದೇಶನದಂತೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಪತ್ತೆ ಠಾಣಾಧಿಕಾರಿ ವಾಣಿಶ್ರೀ, ಎಎಸ್‌ಐ ರವಿ ಹಾಗೂ ಸಿಬ್ಬಂದಿ ನವೀನ್ ಕುಮಾರ್ ಎಸ್.ಎಲ್., ಬಸವರಾಜು ಎಂ., ಮಹೇಶ್ ಎಸ್. ಮತ್ತು ಪರಮೇಶ್ ಎಸ್. ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
- ಕಿಶೋರ್ ಶೆಟ್ಟಿ